ಮಂಗಳೂರು

ತಿರುವೈಲ್‌ನಲ್ಲಿ ಅಣಬೆ ಘಟಕದಿಂದ ದುರ್ವಾಸನೆ, ಸ್ಥಳೀಯರ ಪ್ರತಿಭಟನೆ

ಮಂಗಳೂರು: ಅಣಬೆ ಫ್ಯಾಕ್ಟರಿ ವಿರುದ್ಧ ಆಕ್ರೋಶಗೊಂಡ ಜನತೆ ಪ್ರತಿಭಟನೆ ನಡೆಸಿದ ಘಟನೆ ತಿರುವೈಲ್‌ ವಾರ್ಡ್‌ನಲ್ಲಿ ನಡೆದಿದೆ. ಮಂಗಳೂರಿನ ತಿರುವೈಲ್ ವಾರ್ಡ್‌ನ ವೈಟ್ ಗ್ರೋವ್ ಅಗ್ರಿ ಎಲ್ಎಲ್‌ಪಿ ಮಶ್ರೂಮ್ ಫ್ಯಾಕ್ಟರಿಯಿಂದ ದುರ್ವಾಸನೆ ಹೊರಹೊಮ್ಮುತ್ತಿದೆ. ಈ ಸಂಬಂಧ ಸ್ಥಳೀಯರು ಫ್ಯಾಕ್ಟರಿ ಗೇಟ್ ಮುಂಭಾಗ ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಬಂದ ವಾಯುಮಾಲಿನ್ಯ ನಿಯಂತ್ರಣ ಅಧಿಕಾರಿ ರವಿ ಜನರೊಂದಿಗೆ ಉದ್ಧಟತನ ಮೆರೆದಿದ್ದಾರೆ ಎನ್ನಲಾಗಿದೆ.

ಮಾಜಿ ಶಾಸಕರೊಬ್ಬರ ಪಾಲುದಾರಿಕೆಯ ಒಡೆತನಕ್ಕೆ ಸೇರಿದ ವೈಟ್ ಗ್ರೋವ್ ಅಗ್ರಿ ಎಲ್ಎಲ್ ಪಿ ಮಶ್ರೂಮ್ ಫ್ಯಾಕ್ಟರಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಕೊರೊನಾ ಸಂದರ್ಭ ಚಾಕಲೇಟ್ ತಯಾರಕ ಸಂಸ್ಥೆ ಎಂದು ಈ ಫ್ಯಾಕ್ಟರಿಯನ್ನು ಸ್ಥಾಪಿಸಲಾಗಿತ್ತು. ಆ ಬಳಿಕ ಇಲ್ಲಿ ಮಶ್ರೂಮ್ ಬೆಳೆಸಲಾಗುತ್ತಿದೆ ಎಂದು ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಫ್ಯಾಕ್ಟರಿಗೆ ಆಗಮಿಸಿದ ಮಾಜಿ ಶಾಸಕರು ‘ತಾವು ಸಾಕಷ್ಟು ಬಂಡವಾಳ ವ್ಯಯ ಮಾಡಿ ಫ್ಯಾಕ್ಟರಿ ಮಾಡಿದ್ದೇವೆ. ನಮ್ಮನ್ನು ಬದುಕಲು ಬಿಡಿ’ ಎಂದು ಹೇಳಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಫ್ಯಾಕ್ಟರಿಯನ್ನು ಸ್ಥಗಿತಗೊಳಿಸುವಂತೆ ಬುಧವಾರ ನಾಗರಿಕರು ವಾಮಂಜೂರಿನಿಂದ ಫ್ಯಾಕ್ಟರಿ ಗೇಟ್‌ವರೆಗೆ ಮೆರವಣಿಗೆ ಮಾಡಿ ಪ್ರತಿಭಟನೆ ನಡೆಸಿದ್ದರು. ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಕೆಗೆ ಪ್ರಯತ್ನಿಸಿದರು. ಆದರೆ ಫ್ಯಾಕ್ಟರಿಗೆ ಬೀಗ ಜಡಿಯದೇ ನಾವು ಇಲ್ಲಿಂದ ತೆರಳುವುದಿಲ್ಲ ಎನ್ನುವ ಪ್ರತಿಭಟನಾಕಾರರು ಆಕ್ರೋಶಕ್ಕೆ ಮಣಿದ ಅಧಿಕಾರಿಗಳು ಗೇಟ್‌ಗೆ ಬೀಗ ಜಡಿದರು.

Umesha HS

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

3 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

3 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

3 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

4 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

4 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

4 hours ago