Categories: ಕರಾವಳಿ

ಪುತ್ತೂರು: ಕೆಎಸ್‌ ಆರ್‌ಟಿಸಿ ಬಸ್‌ ಮೇಲೆ ಕಾಡಾನೆ ದಾಳಿ, ಅದೃಷ್ಟವಶಾತ್‌ ಪ್ರಯಾಣಿಕರು ಪಾರು

ಮಂಗಳೂರು: ಕೆಎಸ್ಆರ್ ಟಿ‌ ಸಿ ಬಸ್ ಮೇಲೆ‌ ಕಾಡಾನೆ ದಾಳಿ ನಡೆಸಿದ ಘಟನೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ನಡೆದಿದೆ. ಆನೆ ಕೆಎಸ್ಆರ್ ಟಿ ಸಿ ಸ್ಲೀಪರ್ ಕೋಚ್ ಬಸ್‌ಗೆ ದಂತದಿಂದ ತಿವಿದಿದ್ದು ಬಸ್‌ ಗೆ ಹಾನಿಯಾಗಿದೆ. ಆದರೆ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ಗುರುವಾರ ರಾತ್ರಿ ತೆರಳುತ್ತಿದ್ದ ಬಸ್ ಇದಾಗಿದ್ದು. ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಬಸ್‌ ಚಾಲಕ ಯತ್ನಿಸಿದ್ದಾರೆ. ಆದರೂ ದಾಳಿ ಮಾಡಿದ ಕಾಡಾನೆ ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ. ಕಾಡಾನೆ ದಾಳಿ ಯಿಂದ ಬಸ್ಸಿಗೆ ಹಾನಿಯಾಗಿದ್ದು, ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ಬಳಿಕ ಬೆಂಗಳೂರಿನತ್ತ ಬಸ್ ಸಂಚಾರ ನಡೆಸಿದೆ.

Umesha HS

Recent Posts

ಹೆಚ್ಚಾದ ಬಿಸಿಲ ಬೇಗೆ; ಗಗನಕ್ಕೇರಿದ ತರಕಾರಿ ಬೆಲೆ

ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಕಾರಣ ತರಕಾರಿ ಬೆಲೆ ಭಾರಿ ದುಬಾರಿಯಾಗಿದೆ. ಬೀನ್ಸ್ ದರ…

22 mins ago

ಚಿನ್ನದ ಬೆಲೆ ಗ್ರಾಮ್​ಗೆ 130 ರೂನಷ್ಟು ಇಳಿಕೆ; ಇವತ್ತಿನ ಬೆಲೆಗಳೆಷ್ಟು?

ಮೂರ್ನಾಲ್ಕು ವಾರ  ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರ ಸ್ವಲ್ಪಮಟ್ಟಿಗೆ ಇಳಿಕೆ ಕಂಡಿವೆ. ಬೆಳ್ಳಿ ಬೆಲೆ ಕಳೆದ…

39 mins ago

ಆರ್ಚರಿ ವಿಶ್ವಕಪ್​ನಲ್ಲಿ ಭಾರತಕ್ಕೆ 4 ಚಿನ್ನದ ಪದಕ

ಭಾರತದ ಬಿಲ್ಗಾರರು ಆರ್ಚರಿ ವಿಶ್ವಕಪ್​ ಸ್ಟೇಜ್​-1ರಲ್ಲಿ 4 ಚಿನ್ನ ಸಹಿತ 5 ಪದಕ ಗೆದ್ದುಕೊಂಡಿದ್ದಾರೆ. ಏಷ್ಯನ್​ ಗೇಮ್ಸ್​ ಚಾಂಪಿಯನ್​ ಜ್ಯೋತಿ…

57 mins ago

ರಾಜ್ಯದಲ್ಲಿ ಇಂದು 4 ಕಡೆ ಪ್ರಧಾನಿ ಮೋದಿ ರ‍್ಯಾಲಿ

ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಕಾವು ಮತ್ತಷ್ಟು ಹೆಚ್ಚಾಗಿದ್ದು, ಈಗಾಗಲೇ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನು ಮೇ 7ರಂದು…

1 hour ago

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ‌ ಏ.28 ರಂದು “ಆಟಿಸಂ ಜಾಗೃತಿ”ಕುರಿತು ಎಕ್ಷಪ್ಸನಲ್ ಕಾರ್ಯಕ್ರಮ

ನ್ಯೂಸ್‌ ಕರ್ನಾಟಕದ ಸಾರಥ್ಯದಲ್ಲಿ ಪಾಥ್ವೆ ಎಂಟರ್‌ ಪ್ರೈಸಸ್‌ ಹಾಗೂ ಸ್ಪೇಷಲ್‌ ಪೇರೆಂಟ್ಸ್‌ ಸಪೋರ್ಟ್‌ ಗ್ರೂಪ್‌ ಅವರ ಸಹಯೋಗದೊಂದಿಗೆ Aibha association…

9 hours ago

ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಎಸ್‌ಐಟಿ ತನಿಖೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ…

10 hours ago