ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕರಾವಳಿ ತೀರದ ಭಾಗವಾದ ಗಂಗೊಳ್ಳಿ ಹಾಗೂ ಬೈಂದೂರು ತಾಲೂಕಿನ ನಾವುಂದ-ಮರವಂತೆ, ಶಿರೂರಿನಲ್ಲಿ ಮುಸ್ಲಿಂ ಬಾಂಧವರು ಖುತುಬ್ ಎ ರಂಜಾನ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಶನಿವಾರ ಆಚರಿಸಿದರು.
ಜುಮ್ಮಾ ಮಸೀದಿ ಗಂಗೊಳ್ಳಿಯಲ್ಲಿ ಜನಾಬ್ ಮೌಲಾನಾ ಮುಝುಮ್ಮಿಲ್ ನದ್ವಿ ಅವರ ನೇತೃತ್ವದಲ್ಲಿ ಪ್ರಾರ್ಥನೆ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.
ಗಂಗೊಳ್ಳಿ ಪೇಟೆಯಲ್ಲಿ ಮೆರವಣಿಗೆ ಮೂಲಕ ಸಾಗಿದ ಮುಸ್ಲಿಂ ಬಾಂಧವರು ಮಸೀದಿಯಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿದರು.