Categories: ಕರಾವಳಿ

ವಿಕಲಚೇತನರ ಸಾಧನೆ ಬ್ರಹ್ಮಕಲಶದಷ್ಟೇ ಪ್ರಮುಖ: ಶಾಸಕ ಹರೀಶ್ ಪೂಂಜ

ಮಂಗಳೂರು: ಕೈಕಾಲು ಇದ್ದು ಸದೃಢರಾಗಿರುವ ನಾವು ಮಾಡುವ ವೇದಿಕೆಯ ಕಲೆ ಪ್ರಸ್ತುತಿಗೂ ವಿಕಲಚೇತನರು ಪೂಜ್ಯ ಭಾವನೆಯ ರೀತಿಯಲ್ಲಿ ಮಾಡುವ ಕಲಾ ಪ್ರದರ್ಶನಕ್ಕೂ ಬಹಳಷ್ಟು ವ್ಯತ್ಯಾಸ ಇದೆ. ವಿಕಲಚೇತನರು ಮಾಡುವ ಈ ಅದ್ಭುತ ಸಾಧನೆ ಬ್ರಹ್ಮಕಲಶೋತ್ಸವದಷ್ಟೇ ಪ್ರಾಮುಖ್ಯತೆ ಪಡೆಯುತ್ತದೆ. ಇಂತಹ ಕಲಾಪ್ರತಿಭೆಗಳಿಗೆ ಮಹಾಲಿಂಗೇಶ್ವರ ದೇವರು ತಂಡಕ್ಕೆ ಒಳಿತನ್ನು ಮಾಡಲಿ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಹೇಳಿದರು.

ಅಜಿಲಸೀಮೆಗೆ ಒಳಪಟ್ಟ ಇತಿಹಾಸ ಪ್ರಸಿದ್ಧ ದ.ಕ. ಜಿಲ್ಲೆಯ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ. ೧೯ರಿಂದ ೨೭ರವರೆಗೆ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಜರುಗಲಿದ್ದು, ಫೆ. ೨೧ರಂದು ಬೆಂಗಳೂರಿನ ಖ್ಯಾತ ನೃತ್ಯ ತಂಡದಿಂದ ನಡೆದ ಅಂತರಾಷ್ಟ್ರೀಯ ಮಟ್ಟದ ಮಿರಕಲ್ ಆನ್ ವೀಲ್ಸ್ ನೃತ್ಯ ಪ್ರದರ್ಶನದ ತಂಡವನ್ನು ಉದ್ದೇಶಿಸಿ ಮಾತನಾಡಿದರು.

ವೀಲ್‌ಚೆಯರ್‌ನಲ್ಲಿ ತಂಡ ಮಾಡಿದ ಅತ್ಯದ್ಭುತ ನೃತ್ಯವನ್ನು ಸಾವಿರಾರು ಮಂದಿ ಕಲಾ ಪ್ರೇಕ್ಷಕರು ವೀಕ್ಷಿಸಿದರು. ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದ ಪ್ರಾಯೋಜಕತ್ವವನ್ನು ಬೆಂಗಳೂರಿನ ಉದ್ಯಮಿ ಅಶ್ವಥ್ ಹೆಗ್ಡೆ ವಹಿಸಿದ್ದರು.

Umesha HS

Recent Posts

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

4 mins ago

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

17 mins ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

37 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

45 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

51 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

1 hour ago