Categories: ಕರಾವಳಿ

ಇಬ್ಬರ ಜಗಳದಿಂದ ಮೂರನೆಯವರಿಗೆ ಲಾಭ: ಪುತ್ತೂರಿಗೆ ರೈ ರಾಜ

ಮಂಗಳೂರು : ವರುಣಾ, ರಾಮನಗರ ಸೇರಿದಂತೆ ರಾಜ್ಯದ ಹಲವು ಕ್ಷೇತ್ರಗಳಂತೆ ಪುತ್ತೂರು ಕ್ಷೇತ್ರವೂ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿತ್ತು. ಇಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಜಯ ಸಾಧಿಸಿದ್ದಾರೆ.

ಕೊನೆಯ ಹಂತದ ವರೆಗೆ ತೀವ್ರ ಸ್ಪರ್ಧೆ ಒಡ್ಡಿದ ಹಿಂದೂ ಮುಖಂಡ, ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ 4149 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಮೂರನೇ ಸ್ಥಾನ ಪಡೆದಿದ್ದಾರೆ.

ಅಶೋಕ್ ಕುಮಾರ್ ರೈ 66607 ,ಅರುಣ್ ಕುಮಾರ್ ಪುತ್ತಿಲ 62458 , ಆಶಾ ತಿಮ್ಮಪ್ಪ ಗೌಡ 37558 ಮತಗಳನ್ನು ಪಡೆದಿದ್ದಾರೆ. ಮತ ವಿಭಜನೆ ಯಾಗುತ್ತದೆ ಎಂದು ಅಂದಾಜಿಸಲಾಗಿದ್ದ ಎಸ್ ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ 2773 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ನ ದಿವ್ಯಪ್ರಭ ಗೌಡ ಅವರು 666 ಮತಗಳನ್ನು ಮಾತ್ರ ಪಡೆದಿದ್ದಾರೆ. ನೋಟಾಕ್ಕೆ 866 ಮತ ಗಳು ಚಲಾವಣೆಯಾಗಿವೆ. ಕೊನೆಯ ಹಂತದ ವರೆಗೆ ತೀವ್ರ ಹೋರಾಟವನ್ನು ಪುತ್ತಿಲ ಅವರು ನೀಡಿದ್ದರು. ಇಬ್ಬರ ಜಗಳದಿಂದ ಮೂರನೆಯವರಿಗೆ ಲಾಭ ಆಯಿತು ಎನ್ನುವ ಮಾತು ಕರಾವಳಿಯ ಎಲ್ಲೆಡೆ ಮಾತನಾಡುತ್ತಿದ್ದಾರೆ.

Umesha HS

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

33 mins ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

42 mins ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

1 hour ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

1 hour ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

2 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

2 hours ago