ಹಿರಿಯ ನಟ, ನಿರ್ದೇಶಕ, ಸಂಘಟಕ ವಿ.ಜಿ.ಪಾಲ್ ನಿಧನ

ಮಂಗಳೂರು: ತುಳು ರಂಗಭೂಮಿಯ ಹಿರಿಯ ನಟ, ನಿರ್ದೇಶಕ, ಸಂಘಟಕ ವೇಣುಗೋಪಾಲ ಟಿ. ಕೋಟ್ಯಾನ್‌ (ವಿ.ಜಿ.ಪಾಲ್) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು.

ತುಳು ರಂಗಭೂಮಿಯಲ್ಲಿ ಐದು ದಶಕಗಳಿಗೂ ಹೆಚ್ಚು ಸೇವೆ ಸಲ್ಲಿಸಿದ್ದ ಅವರು ಹತ್ತಾರು ನಾಟಕಗಳಲ್ಲಿ ಹಾಗೂ ತುಳು ಮತ್ತು ಕನ್ನಡ ಭಾಷೆಯ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ‘ಕಲ್ಲಿಗದ ಕುರುಕ್ಷೇತ್ರ’ ತುಳು ನಾಟಕದ ಮೂಲಕ 1961ರಲ್ಲಿ ರಂಗಪ್ರವೇಶ ಮಾಡಿದ ವಿ.ಜಿ.ಪಾಲ್ ಹಾಸ್ಯ ಪಾತ್ರಕ್ಕೊಂದು ಮಾದರಿಯಾಗಿದ್ದರು. ಚಲನಚಿತ್ರಗಳು, ಕಿರುತೆರೆ, ಧ್ವನಿ ಸುರುಳಿಗಳಿಗೆ ಕಂಠದಾನ ಮಾಡಿದ್ದರು. ತುಳು ನಾಟಕಗಳನ್ನು ಪಥಮ ಬಾರಿಗೆ ಕೊಲ್ಲಿ ರಾಷ್ಟ್ರಗಳಲ್ಲಿ ಪ್ರದರ್ಶನ ನೀಡಿದ್ದರು.

Ashitha S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

8 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

8 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

9 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

9 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

9 hours ago