News Karnataka Kannada
Tuesday, April 23 2024
Cricket
ಉಡುಪಿ

ಹಿಜಾಬ್​ ನಿರಾಕರಿಸಿದ್ದಕ್ಕೆ ಪರೀಕ್ಷೆ ಬರೆಯದೇ ವಿದ್ಯಾರ್ಥಿನಿಯರು ಮನೆಗೆ ವಾಪಸ್

Burka
Photo Credit :

ಉಡುಪಿ : ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಆದರೆ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯದೆ ಮನೆಗೆ ವಾಪಸ್ ಆಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡಪಿಯ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕೊಡಬೇಕು ಎಂದು ವಿದ್ಯಾರ್ಥಿನಿಯರಾದ ಆಲಿಯಾ ಅಸ್ಸಾದಿ ಮತ್ತು ರೇಷಂ ಮನವಿ ಮಾಡಿದ್ದರು. ಆದರೆ ಪರೀಕ್ಷೆ ಆರಂಭವಾದರೂ ಇವರಿಬ್ಬರೂ ಪ್ರಾಚಾರ್ಯರ ಕಚೇರಿಯಲ್ಲಿಯೇ ಕುಳಿತಿದ್ದು, ಚರ್ಚೆ ಮುಂದುವರೆಸಿದ್ದರು.

ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕೊಡಲು ಸಾಧ್ಯವಿಲ್ಲ ಎಂದು ಪ್ರಾಂಶುಪಾಲರು ಸ್ಪಷ್ಟಪಡಿಸಿದ ನಂತರ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೇ ಕಾಲೇಜಿನ ಪರೀಕ್ಷಾ ಕೇಂದ್ರದಿಂದ ಮನೆಗೆ ವಾಪಸ್ ಆಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು