News Karnataka Kannada
Tuesday, April 30 2024
ಉಡುಪಿ

ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಸಚಿವ ವಿ. ಸುನೀಲ್ ಕುಮಾರ್ ಕಂಬನಿ

Fernandes Oscar 13092021
Photo Credit :

ಉಡುಪಿ: ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಲೋಕಸಭಾ ಸದಸ್ಯರಾಗಿ, ರಾಜ್ಯ ಸಭಾ ಸದಸ್ಯರಾಗಿ ಅವರು ಸಲ್ಲಿಸಿದ ಸೇವೆ ಅನನ್ಯವಾದುದು. ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಆಸ್ಕರ್ ಫೆರ್ನಾಂಡಿಸ್ ಉಡುಪಿಯಲ್ಲಿ ಹುಟ್ಟಿ, ನಂತರ ರಾಷ್ಟ್ರ ಮಟ್ಟದ ನಾಯಕರಾಗಿ ಬೆಳೆದದ್ದು ಒಂದು ಸಾಹಸಗಾಥೆ.

ಅವರ ನಿಧನದಿಂದ ರಾಜ್ಯ ಮತ್ತು ರಾಷ್ಟ್ರ ಒಬ್ಬ ಅತ್ಯುತ್ತಮ ಜನನಾಯಕ ನನ್ನ ಕಳೆದುಕೊಂಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ. ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಚಿವ ಸುನೀಲ್ ಕುಮಾರ್ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು