Categories: ಉಡುಪಿ

ಉಡುಪಿಯಲ್ಲಿ ಇಂದು ಹತ್ತು ಮಂದಿಗೆ ಕೊರೋನಾ ಪಾಸಿಟಿವ್

ಉಡುಪಿ : ಜಿಲ್ಲೆಯಲ್ಲಿ ಇಂದು ಹತ್ತು ಮಂದಿಗೆ ಕೊರೋನಾ ಪಾಸಿಟಿವ್ ಬಂದಿದ್ದಾರೆ. ಇಂದು ಮೂವರು ಕೋವಿಡ್‌ ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರೆ, 70 ಮಂದಿ ಇನ್ನೂ ಸೋಂಕಿಗೆ ಚಿಕಿತ್ಸೆ ಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ತಲಾ ಐವರು ಪುರುಷ ಹಾಗೂ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ ಎಂಟು ಮಂದಿ ಉಡುಪಿ, ತಲಾ ಒಬ್ಬರು ಕುಂದಾಪುರ ಹಾಗೂ ಕಾರ್ಕಳ ತಾಲೂಕಿನವರು. ಪಾಸಿಟಿವ್ ಬಂದ ಇಬ್ಬರನ್ನು ಕೋವಿಡ್ ಆಸ್ಪತ್ರೆಗೆ ಹಾಗೂ ಉಳಿದ ಎಂಟು ಮಂದಿಯನ್ನು ಅವರವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಹ ಜಿಲ್ಲೆಯಲ್ಲಿ ಕೊರೋನದಿಂದ ಯಾರೂ ಮೃತಪಟ್ಟಿಲ್ಲ.

ಬುಧವಾರ ಸೋಂಕಿನಿಂದ ಮೂವರು ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,358ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3558 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,904ಕ್ಕೇರಿದೆ.

7373 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಗುರುವಾರ ಒಟ್ಟು 7373 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 1293 ಮಂದಿ ಮೊದಲ ಡೋಸ್ ಹಾಗೂ 6080 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 782 ಮಂದಿ ಮೊದಲ ಡೋಸ್ ಹಾಗೂ 4178 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 511 ಮಂದಿ ಮೊದಲ ಡೋಸ್ ಹಾಗೂ 1896 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಅಲ್ಲದೇ ನಾಲ್ವರು ಆರೋಗ್ಯ ಕಾರ್ಯಕರ್ತರು ಹಾಗೂ ಇಬ್ಬರು ಮುಂಚೂಣಿ ಕಾರ್ಯಕರ್ತರು ಸಹ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

Gayathri SG

Recent Posts

ಅಶ್ಲೀಲ ವಿಡಿಯೋ ಪ್ರಕರಣ : ತಂದೆ ಹೆಚ್​​ಡಿ ರೇವಣ್ಣ ವಿರುದ್ಧವೂ ಸಂತ್ರಸ್ಥೆ ದೂರು

ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಇದೀಗ ಬಾರಿ ಸದ್ದು ಮಾಡುತ್ತಿದ್ದು ಇವರ ಜೊತೆ ಅವರ ತಂದೆ…

35 mins ago

ಜಿಂಕೆ ಕೊಂದು ಎಳೆದೊಯ್ದ ಹುಲಿ : ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ದೃಶ್ಯ

ಬಂಡೀಪುರದಲ್ಲಿ ಸಪಾರಿಗೆ ತೆರಳಿದ್ದ ವಾಹನಗಳ ಸನಿಹದಲ್ಲೇ ಹುಲಿಯೊಂದು ಜಿಂಕೆಯನ್ನ ಭೇಟೆಯಾಡಿ ಎಳೆದೊಯ್ಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.

1 hour ago

ಮೇ 29ಕ್ಕೆ ವಿಜಯಪುರಕ್ಕೆ ಮಾಜಿ ಉಪ ಮುಖ್ಯ ಮಂತ್ರಿ ಲಕ್ಷ್ಮಣ್ ಸವದಿ ಆಗಮನ

ಮುಂಬರುವ 7 ಮೇ 2024 ರಂದು ಜರುಗುವ ಸಾರ್ವತ್ರಿಕ ವಿಜಯಪುರ (ಮೀಸಲು) ಲೋಕಸಭೆ ಚುನಾವಣೆ ಪ್ರಚಾರದ ಅಂಗವಾಗಿ ಸ್ಟಾರ್ ಪ್ರಚಾರಕರು…

2 hours ago

ಮಾಜಿ ಶಾಸಕ ದೇಸಾಯಿಯವರನ್ನು ಭೇಟಿಯಾದ ಆಲಗೂರ್

ಜಿಲ್ಲೆಯ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಶಾಸಕರಾದ ಶಿವಪುತ್ರಪ್ಪ ದೇಸಾಯಿಯವರನ್ನು ಭಾನುವಾರ ತಾಳಿಕೋಟೆಯಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರೊ.ರಾಜು…

2 hours ago

ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಮತಯಾಚನೆ ನಡೆಸಿದ ಖೂಬಾ, ಖಾಶೆಂಪುರ್, ಬೆಲ್ದಾಳೆ

ಬೀದರ್ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವರಾದ ಭಗವಂತ ಖೂಬಾರವರು, ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾದ…

2 hours ago

ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಕರ್ನಾಟಕ ಪ್ರವಾಸದಲ್ಲಿರುವ ಮೋದಿಗೆ‌ ಗೋ ಬ್ಯಾಕ್ ಘೋಷಣೆ ಎದುರಾಗಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಬಿಜೆಪಿ‌ ಸರ್ಕಾರದ‌ ಡಿಎನ್‌ಎ ಕರ್ನಾಟಕ…

2 hours ago