Categories: ಉಡುಪಿ

ಉಡುಪಿಯಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ಉಡುಪಿ : ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಏರುಗತಿಯಲ್ಲಿ ಸಾಗಿರುವ ಕೋವಿಡ್ ಪಾಸಿಟಿವ್ ಬುಧವಾರ 361ಕ್ಕೆ ನೆಗೆದಿದೆ. ದಿನದಲ್ಲಿ ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆಯೂ 1625ಕ್ಕೇರಿದೆ. ಬುಧವಾರ 78 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಬುಧವಾರ ಪಾಸಿಟಿವ್ ಬಂದ 361 ಮಂದಿಯಲ್ಲಿ 178 ಮಂದಿ ಪುರುಷ ರಾದರೆ 183 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 281 ಮಂದಿ ಉಡುಪಿ ತಾಲೂಕಿಗೆ ಸೇರಿದವರಾದರೆ ಕುಂದಾಪುರ ತಾಲೂಕಿನ 26 ಮಂದಿ ಹಾಗೂ ಕಾರ್ಕಳ ತಾಲೂಕಿನ 54 ಮಂದಿ ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಈ ಮೂರು ತಾಲೂಕುಗಳ ಪಾಸಿಟಿವಿಟಿ ಪ್ರಮಾಣ ಸದ್ಯ ಶೇ.7.41, ಶೇ.2 ಹಾಗೂ ಶೇ.3.90 ಆಗಿದೆ. ಜಿಲ್ಲೆಯ ಪ್ರಮಾಣ ಶೇ.5.57ರಲ್ಲಿದೆ.

ಬುಧವಾರ ಪಾಸಿಟಿವ್ ಬಂದ 361 ಮಂದಿಯಲ್ಲಿ 24 ಮಂದಿಯನ್ನು ಕೋವಿಡ್ ಕೇರ್‌ ಸೆಂಟರ್‌ಗೂ, ನಾಲ್ವರನ್ನು ಕೋವಿಡ್ ಆಸ್ಪತ್ರೆಗೂ, ಏಳು ಮಂದಿ ಯನ್ನು ಕೋವಿಡ್ ಹೆಲ್ತ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತಿದ್ದು, ಉಳಿದ 326 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

80 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ: ಜಿಲ್ಲೆಯಲ್ಲೀಗ 80 ಮಂದಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಪಡೆಯುತಿದ್ದಾರೆ. ಇವರಲ್ಲಿ ಆರು ಮಂದಿ ಐಸಿಯು ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತಿದ್ದರೆ 12 ಮಂದಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 8 ಮಂದಿ ಎಚ್‌ಡಿಯು ಹಾಗೂ 54 ಮಂದಿ ಜನರಲ್ ವಾರ್ಡಿನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಮಂಗಳವಾರ 78 ಮಂದಿ ರೋಗದಿಂದ ಗುಣಮುಖರಾಗುವ ಮೂಲಕ ಕೊರೋನದಿಂದ ಜಿಲ್ಲೆಯಲ್ಲಿ ಜ.1ರಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 376ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ ಉಡುಪಿ ತಾಲೂಕಿನಲ್ಲಿ 3793 ಮಂದಿ, ಕುಂದಾ ಪುರದಲ್ಲಿ 1300 ಹಾಗೂ ಕಾರ್ಕಳ ತಾಲೂಕಿನ 1383 ಮಂದಿ ಸೇರಿದಂತೆ ಒಟ್ಟು 6476 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 1853ಕ್ಕೇರಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.

1084 ಮಂದಿಗೆ ಮುನ್ನೆಚ್ಚರಿಕೆ ಡೋಸ್: ಜಿಲ್ಲೆಯಲ್ಲಿ ಇಂದು ಒಟ್ಟು 1084 ಮಂದಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥರಿಗೆ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 60 ವರ್ಷಕ್ಕೂ ಮೇಲ್ಪಟ್ಟ 284 ಮಂದಿ ಲಸಿಕೆ ಪಡೆದರೆ, 589 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 211 ಮಂದಿ ಮುಂಚೂಣಿ ಕಾರ್ಯಕರ್ತರು ಸೇರಿದ್ದಾರೆ.

4945 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 4945 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇವರಲ್ಲಿ 2206 ಮಂದಿ 15ರಿಂದ 18 ವರ್ಷದೊಳಗಿನ ಮಕ್ಕಳಿಗೆ ಮೊದಲ ಡೋಸ್ ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ನೀಡಲಾಗಿದೆ. ಒಟ್ಟಾರೆಯಾಗಿ ದಿನದಲ್ಲಿ 3363 ಮಂದಿ ಮೊದಲ ಡೋಸ್ ಹಾಗೂ 1582 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ.ಉಡುಪ ತಿಳಿಸಿದ್ದಾರೆ.

Gayathri SG

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

11 mins ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

26 mins ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

53 mins ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

1 hour ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

2 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

2 hours ago