ಉಡುಪಿ, ಡಿ.3: ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಮುಂಜಾನೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ರಾಜ್ಯಪಾಲರನ್ನು ಅದಮಾರು ಪರ್ಯಾಯ ಮಠಾಧೀಶ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಪರ್ಯಾಯ ಮಂಗಲೋತ್ಸವದ ಆಮಂತ್ರಣ ಪತ್ರಿಕೆ ನೀಡಿದರು.
ಈ ವೇಳೆ ಶಾಸಕ ರಘುಪತಿ ಭಟ್, ಪರ್ಯಾಯ ಮಠದ ವ್ಯವಸ್ಥಾಪಕ ಗೋವಿಂದರಾಜ್, ಶ್ರೀ ಕೃಷ್ಣಾ ಸೇವಾ ಬಳಗದ ಪ್ರದೀಪ್ ರಾವ್ ಮೊದಲಾದವರು ಉಪಸ್ಥಿತರಿದ್ದರು. ಬಳಿಕ ರಾಜ್ಯಪಾಲರು ಇಲ್ಲಿಂದ ಕೊಲ್ಲೂರಿಗೆ ತೆರಳಿದರು.