ಉಡುಪಿ: ಎಂಜಿನಿಯರಿಂಗ್ ವಿದ್ಯಾರ್ಥಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇರೆಗೆ ಮಣಿಪಾಲ್ ತಾಂತ್ರಿತ ಸಂಸ್ಥೆಯ ಮಾಜಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದೆಹಲಿ ಮೂಲದ ಆರ್ಯನ್ ಚಂದಾವನಿ (24) ಎಂದು ಗುರುತಿಸಲಾಗಿದೆ. ಅಕ್ಟೋಬರ್ 16 ರಂದು ಇಬ್ಬರು ಪಾರ್ಟಿ ಮಾಡಿದ್ದು, ಇಂದ್ರಾಳಿಯ ಫ್ಲಾಟ್ ವೊಂದರಲ್ಲಿ ಆರೋಪಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಈ ವಿಚಾರವನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ತಿಳಿಸಿರುವ ಸಂತ್ರಸ್ತೆ, ಕೇಸ್ ದಾಖಲಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ಕೋಮಾ ಸ್ಥಿತಿಯಲ್ಲಿದ್ದು, ತೀವ್ರ ರಕ್ತಸ್ರಾವವಾಗಿರುವುದಾಗಿ ತಿಳಿದುಬಂದಿದೆ. ಪ್ರಸ್ತುತ ಆಕೆಗೆ ಮಣಿಪಾಲ್ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಅತ್ಯಾಚಾರ ನಡೆದ ಮಾರನೇ ದಿನವೇ ಆರೋಪಿಯನ್ನು ಬಂಧಿಸಲಾಗಿದೆ. ಆತನನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಉಡುಪಿ ಎಸ್ ಪಿ ವಿಷ್ಣುವರ್ಧನ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಖಚಿತಪಡಿಸಿದ್ದಾರೆ.
ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…
ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…
ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…
ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಸಂಭವಿಸಿದೆ
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…
ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…