News Karnataka Kannada
Monday, April 29 2024
ಉಡುಪಿ

ಉಡುಪಿ, ಐದು ಮಂದಿಯಲ್ಲಿ ಕೊರೋನ ಸೋಂಕು ಪತ್ತೆ

Corona World 10072021
Photo Credit :

ಉಡುಪಿ, ನ.8 : ಸೋಮವಾರವೂ ಜಿಲ್ಲೆಯಲ್ಲಿ ಐದು ಮಂದಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿದೆ. ದಿನದಲ್ಲಿ ನಾಲ್ವರು ರೋಗದಿಂದ ಗುಣಮುಖರಾದರೆ, ಈಗಲೂ ಚಿಕಿತ್ಸೆಯಲ್ಲಿರುವವರ ಸಂಖ್ಯೆ 43 ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ನಾಲ್ವರು ಪುರುಷರು ಮತ್ತು ಓರ್ವ ಮಹಿಳೆಯಲ್ಲಿ ಸೋಂಕು ಕಂಡುಬಂದಿದೆ. ಇವರಲ್ಲಿ ಮೂವರು ಉಡುಪಿ ತಾಲೂಕಿನವರು. ಒಬ್ಬರು ಕಾರ್ಕಳದವರಾದರೆ, ಇನ್ನೊಬ್ಬರು ಹೊರಜಿಲ್ಲೆಯವರು. ಇವರಲ್ಲಿ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೆ ಉಳಿದ ನಾಲ್ವರು ಮನೆಯಲ್ಲೇ ಚಿಕಿತ್ಸೆ ಪಡೆಯುತಿದ್ದಾರೆ. ಸತತ 20ನೇ ದಿನವಾದ ಇಂದು ಸಹ ಸೋಂಕಿನಿಂದ ಯಾರೂ ಮೃತಪಟ್ಟಿಲ್ಲ.

ರವಿವಾರ ನಾಲ್ವರು ಸೋಂಕಿನಿಂದ ಗುಣಮುಖರಾಗಿದ್ದು,ಈವರೆಗೆ ಕೊರೋನ ದಿಂದ ಚೇತರಿಸಿಕೊಂಡವರ ಸಂಖ್ಯೆ 76,239ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 3056 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,758ಕ್ಕೇರಿದೆ.

3478 ಮಂದಿಗೆ ಲಸಿಕೆ: ಇಂದು ಜಿಲ್ಲೆಯಲ್ಲಿ ಒಟ್ಟು 3478 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದು, ಇವರಲ್ಲಿ 283 ಮಂದಿ ಮೊದಲ ಡೋಸ್ ಹಾಗೂ 3195 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 222 ಮಂದಿ ಮೊದಲ ಡೋಸ್ ಹಾಗೂ 2453 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 61ಮಂದಿ ಮೊದಲ ಡೋಸ್ ಹಾಗೂ 736 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ತಲಾ ಮೂವರು ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತ ಇಂದು ಎರಡನೇ ಡೋಸ್ ಲಸಿಕೆ ಸ್ವೀಕರಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು