ಉಡುಪಿ: ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ ಕೊರೊನಾ ಸೋಂಕಿತರ ಸಂಖ್ಯೆ ಶತಕ ದಾಟಿದೆ. ಉಡುಪಿಯಲ್ಲಿ ಇವತ್ತು 148 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ.
ಈ ಪೈಕಿ ಉಡುಪಿ ತಾಲೂಕಿನಲ್ಲೇ 125 ಪ್ರಕರಣ ದಾಖಲಾಗಿದ್ದು, ಜಿಲ್ಲೆಯ ಪಾಸಿಟಿವಿಟಿ ರೇಟ್ ಸದ್ಯ 2.46 ರಷ್ಟಿದೆ. ಮಣಿಪಾಲ ವಿವಿ ಕ್ಯಾಂಪಸ್ನಲ್ಲಿ ನೂರಕ್ಕೂ ಹೆಚ್ಚು ಪಾಸಿಟಿವ್ ಕಂಡುಬಂದಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಮಾಹಿತಿ ನೀಡಿವೆ.