ಉಡುಪಿ: ಜಿಲ್ಲೆಯಲ್ಲಿ ನಿನ್ನೆತನಕ ಒಟ್ಟು 1293 ಮಂದಿ ಮಕ್ಕಳು ಹಾಗೂ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದ್ದಾಗಿ ಆರೋಗ್ಯ ಇಲಾಖೆ ಮೂಲಗಳು ಮಾಹಿತಿ ನೀಡಿವೆ.
ಜನವರಿ ತಿಂಗಳಲ್ಲಿ 0-5 ವರ್ಷದೊಳಗಿನ ಒಟ್ಟು 20 ಮಕ್ಕಳಲ್ಲಿ, 5 ರಿಂದ 10 ವರ್ಷದೊಳಗಿನ 72, 10 ರಿಂದ 15ವರ್ಷದೊಳಗಿನ 256, 15ರಿಂದ 20 ವರ್ಷದೊಳಗಿನ 473 ಹಾಗೂ 21 ರಿಂದ 25 ವರ್ಷದೊಳಗಿನ 472 ಮಂದಿ ವಿದ್ಯಾರ್ಥಿಗಳಲ್ಲಿ ಕೊರೊನಾ ಪತ್ತೆಯಾಗಿದೆ.
ವಿದ್ಯಾರ್ಥಿಗಳಲ್ಲಿ ವೈದ್ಯಕೀಯ, ಇಂಜಿನಿಯರಿಂಗ್, ನರ್ಸಿಂಗ್, ಫಾರ್ಮಸಿ ಸೇರಿದಂತೆ ವಿವಿಧ ಪದವಿ ತರಗತಿಗಳಲ್ಲಿ ಓದುತ್ತಿರುವವರು, ಪದವಿ ಪೂರ್ವ ಕಾಲೇಜು, ಹೈಸ್ಕೂಲ್, ಪ್ರಾಥಮಿಕ ಶಾಲೆಗಳಲ್ಲಿ ಕಲಿಯುತ್ತಿರುವ ಪುಟಾಣಿ ಮಕ್ಕಳೂ ಸೇರಿದ್ದಾರೆ.
ಜಿಲ್ಲೆಯಲ್ಲಿ 11 ಕಂಟೈನ್ಮೆಂಟ್ ಝೋನ್:
ಜಿಲ್ಲೆಯಲ್ಲಿ ನಿನ್ನೆವರೆಗೆ ಒಟ್ಟು 11 ಕಂಟೈನ್ ಮೆಂಟ್ ಝೋನ್ ಮಾಡಲಾಗಿದೆ.ಎರಡು ಕಾರ್ಕಳ ತಾಲೂಕಿನಲ್ಲಿ, ಒಂದು ಬ್ರಹ್ಮಾವರ ತಾಲೂಕಿನಲ್ಲಿ ಹಾಗೂ ಉಳಿದ ಎಂಟು ಮಣಿಪಾಲ ಆಸುಪಾಸಿನಲ್ಲಿವೆ. ಇವುಗಳಲ್ಲಿ ಮೂರು ಮಣಿಪಾಲದ ವಸತಿ ಸಂಕೀರ್ಣಗಳು ಸೇರಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ಆರ್ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್ಸಿಬಿ…
ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು 19.3 ಓವರ್ಗಳಲ್ಲಿ 147…
ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…