ಉಡುಪಿ

ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದು

ಉಡುಪಿ: ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಶುಕ್ರವಾರ ಆದೇಶ ಹೊರಡಿಸಿದ್ದಾರೆ. ವಾರಾಂತ್ಯ ಕರ್ಫ್ಯೂ ರದ್ದುಗೊಂಡರೂ ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ 9 ರಿಂದ ಬೆಳಗ್ಗೆ 5 ಗಂಟೆಯ ರವರೆಗೆ ಕರ್ಫ್ಯೂ ಇರುತ್ತದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

ವಾರಾಂತ್ಯ ಕರ್ಫ್ಯೂ ಬಗ್ಗೆ ಸರಕಾರದಿಂದ ನಿರ್ದೇಶನ ಬಂದಿದೆ. ಜಿಲ್ಲಾಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲು ಸೂಚಿಸಿದ್ದಾರೆ. ಜಿಲ್ಲೆಯಲ್ಲಿ ತಜ್ಞರ ಸಮಿತಿ ಸಭೆ ಮಾಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ವಾರಾಂತ್ಯ ಕರ್ಪ್ಯೂ ಹಿಂಪಡೆಯಲಾಗಿದೆ. ಉಳಿದಂತೆ ಎಲ್ಲಾ ನಿರ್ಬಂಧಗಳು ಹಿಂದಿನಂತೆಯೇ ಮುಂದುವರೆಯುತ್ತವೆ ಎಂದು ಜಿಲ್ಲಾಧಿಕಾರಿ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಕೇರಳದಿಂದ ಕರ್ನಾಟಕಕ್ಕೆ ಬರುವವರು ಎರಡು ತಿಂಗಳು ಪ್ರಯಾಣ ಮುಂದೂಡುವಂತೆ ಸರಕಾರ ಸಲಹೆ ನೀಡಿದೆ. ಅದೇ ರೀತಿ ಕೆಲಸದ ನಿಮಿತ್ತ ಕೇರಳದಿಂದ ಕರ್ನಾಟಕಕ್ಕೆ ಬರುವ ಮತ್ತು ಕರ್ನಾಟಕದಿಂದ ಕೇರಳಕ್ಕೆ ತೆರಳುವವರು ಮತ್ತು ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡುವಂತೆ ಉಡುಪಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಅದೇ ಜಿಲ್ಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳುವುದು ಇತ್ಯಾದಿ ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸಬೇಕು. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯಬೇಕೆಂದು ಜಿಲ್ಲಾಧಿಕಾರಿ ಕೂರ್ಮರಾವ್ ಮನವಿ ಮಾಡಿದ್ದಾರೆ.

Sneha Gowda

Recent Posts

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

13 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

41 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

49 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

50 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

59 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

1 hour ago