ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಪರೀಕ್ಷೆಗೊಳಗಾದ 917 ಮಂದಿಯಲ್ಲಿ ಕೇವಲ ಇಬ್ಬರಲ್ಲಿ ಮಾತ್ರ ಪಾಸಿಟಿವ್ ದೃಢಪಟ್ಟಿದೆ.ಸದ್ಯ ಜಿಲ್ಲೆಯಲ್ಲಿ ಎಂಟು ಮಂದಿ ಮಾತ್ರ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದು, ಇವರಲ್ಲಿ ಇಬ್ಬರು ವೆಂಟಿಲೇಟ್ ಹಾಗೂ ನಾಲ್ವರು ಐಸಿಯುನಲ್ಲಿದ್ದಾರೆ.
ದಿನದಲ್ಲಿ ಐವರು ಸೋಂಕಿನಿಂದ ಚೇತರಿಸಿಕೊಂಡಿದ್ದು, ಸದ್ಯ ಜಿಲ್ಲೆಯಲ್ಲಿ ಚಿಕಿತ್ಸೆಯಲ್ಲಿರುವವರ ಸಂಖ್ಯೆ 80ಕ್ಕಿಳಿದಿದೆ.
ಇಂದು ಪಾಸಿಟಿವ್ ಬಂದ ಇಬ್ಬರೂ ಪುರುಷರಾಗಿದ್ದು, ಇವರು ಉಡುಪಿ ಹಾಗೂ ಕುಂದಾಪುರ ತಾಲೂಕಿನವರು. ಇಬ್ಬರು ಅವರವರ ಮನೆಗಳಲ್ಲಿ ಚಿಕಿತ್ಸೆಯಲ್ಲಿದ್ದಾರೆ.
ಮಂಗಳವಾರ ಐವರು ರೋಗಮುಕ್ತರಾಗಿದ್ದು, ಕೊರೋನದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 18405ಕ್ಕೇರಿದೆ. ನಿನ್ನೆ ಜಿಲ್ಲೆಯ ಒಟ್ಟು 917 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 18,394ಕ್ಕೇರಿದೆ. ಇಂದು ಸಹ ಜಿಲೆಯಲ್ಲಿ ಕೋವಿಡ್ಗೆ ಯಾರೂ ಬಲಿಯಾಗಿಲ್ಲ.