News Karnataka Kannada
Saturday, April 27 2024
ಉಡುಪಿ

ಉಡುಪಿ: ಶ್ರೀಕೃಷ್ಣಮಠದಲ್ಲಿ ಯಾತ್ರಾರ್ಥಿಗಳ ಚಿನ್ನಾಭರಣ ಕಳವು

ತನಗೆ ಇಷ್ಟವಾದ ಅಡುಗೆ ಮಾಡಲಿಲ್ಲ  ಅನ್ನೋ ಕಾರಣಕ್ಕೆ ಲಿವ್ ಇನ್ ಪಾರ್ಟನರ್ ಆಗಿದ್ದ ಮಹಿಳೆಯನ್ನ ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಹರಿಯಾಣದಲ್ಲಿ ನಡೆದಿದೆ.
Photo Credit :

 ಉಡುಪಿ : ಉಡುಪಿ ಶ್ರೀಕೃಷ್ಣ ಮಠಕ್ಕೆ ಬಂದಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಯಾತ್ರಾರ್ಥಿಗಳ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿರುವುದು ವರದಿಯಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕನಹಳ್ಳಿ ಅತ್ತಿಬೆಲೆಯ ಷಣ್ಮುಗಂ ತನ್ನ ಸಂಸಾರದೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದರು.

ನಂತರ ಕೃಷ್ಣಮಠದ ವಸಂತ ಮಂಟಪದ ಬಳಿ ತೊಟ್ಟಿಲು ಸೇವೆ ನಡೆಯುತ್ತಿದ್ದು, ದೇವರ ಆರತಿಯನ್ನು ಪಡೆಯುವಾಗ ಕಳ್ಳರು, ಷಣ್ಮುಗಂ ಅವರ ಪತ್ನಿಯ ವ್ಯಾನಿಟಿ ಬ್ಯಾಗಿನ ಝಿಪ್ ತೆಗೆದು, ಅದರೊಳಗಿದ್ದ ಚಿನ್ನಾಭರಣ ಹಾಕಿದ್ದ ಬಾಕ್ಸ್‌ನ್ನು ಎಗರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಟ್ಟು 155 ಗ್ರಾಂ ತೂಕದ ಚಿನ್ನಾಭರಣ ಕಳವಾಗಿದ್ದು, ಅವುಗಳ ಒಟ್ಟು ಮೌಲ್ಯ 6,30,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು