News Karnataka Kannada
Saturday, May 04 2024
ಉಡುಪಿ

ಉದ್ಘಾಟನೆಯಾದ ಮೂರೇ ದಿನಕ್ಕೆ ಮಲ್ಪೆ ಬೀಚ್ ನ ತೇಲುವ ಸೇತುವೆ ಸ್ಥಗಿತ

Beach
Photo Credit : News Kannada

ಮಲ್ಪೆ: ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ರಾಜ್ಯದ ಮೊಟ್ಟ ಮೊದಲ ತೇಲುವ ಸೇತುವೆ ಉದ್ಘಾಟನೆಯಾದ 24 ಗಂಟೆಗಳ ಅವಧಿಯಲ್ಲೇ ಕಿತ್ತುಕೊಂಡು ಬಂದಿದೆ. ಪರಿಣಾಮ ಇಲ್ಲಿ ಪ್ರವಾಸಿಗರ ಪ್ರವೇಶ ತಾತ್ಕಾಲಿಕ ಬಂದ್ ಮಾಡಲಾಗಿದೆ. ಉಡುಪಿಯ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ ಆಕರ್ಷಿಸಲು ಇತ್ತೀಚೆಗಷ್ಟೇ ತೇಲುವ ಸೇತುವೆಯನ್ನು ವ್ಯವಸ್ಥೆಗೊಳಿಸಲಾಗಿತ್ತು.

ಇದು ಕರ್ನಾಟಕ ರಾಜ್ಯದಲ್ಲೇ ಪ್ರಥಮ ತೇಲುವ ಸೇತುವೆಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು. ಆದರೀಗ ಈ ತೇಲುವ ಸೇತುವೆ ಉದ್ಘಾಟನೆಯಾದ ಕೆಲವೇ ಗಂಟೆಗಳಲ್ಲಿ ಕಿತ್ತುಕೊಂಡು ಬಂದಿದೆ. ಹೀಗಾಗಿ ತೇಲುವ ಸೇತುವೆ ಬಳಿ ಪ್ರವಾಸಿಗರ ಪ್ರವೇಶ ಬಂದ್ ಮಾಡಲಾಗಿದೆ. ಭಾನುವಾರ ಸಂಜೆಯಿಂದಲೇ ತೇಲುವ ಸೇತುವೆ ಬಂದ್ ಆಗಿದೆ.

ಸೇತುವೆಗೆ ಅಳವಡಿಸಿರುವ ಬ್ಲಾಕ್‌ಗಳು ಚೆಲ್ಲಾಪಿಲ್ಲಿಯಾಗಿದ್ದು, ಇದರ ವಿಡಿಯೋಗಳೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಿರುವಾಗ ನಿರ್ವಹಣೆಯ ದೃಷ್ಟಿಯಿಂದ ತೇಲುವ ಸೇತುವೆ ಕಾರ್ಯ ಸ್ಥಗಿತಗೊಳಿಸಲಾಗಿದೆ ಎಂದು ನಿರ್ವಾಹಕರು ಮಾಹಿತಿ ನೀಡಿದ್ದಾರೆ.

ಇನ್ನು ತೇಲುವ ಸೇತುವೆಯನ್ನು ಫೋಂಟೋನ್ಸ್ ಬ್ಲಾಕ್ ಗಳಿಂದ ಮಾಡಲಾಗಿತ್ತು. ಈ ಬ್ಲಾಕ್ ಗಳು ಅಲೆಗಳ ಒತ್ತಡಕ್ಕೆ ಸಿಲುಕಿ ಕಿತ್ತು ಬಂದಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು