News Karnataka Kannada
Friday, May 03 2024
ಉಡುಪಿ

ಕಾರ್ಕಳ: ಒಡಹುಟ್ಟಿದ ಅಣ್ಣನನ್ನೇ ಚೂರಿಯಿಂದ ಇರಿದು ಕೊಂದ ತಮ್ಮ

Murder
Photo Credit :

ಕಾರ್ಕಳ, ಮಾ. 6 : ಜಾಗದ ತಕರಾರಿನ ವೈಷಮ್ಯಕ್ಕೆ ಒಡಹುಟ್ಟಿದ ಅಣ್ಣನನ್ನೇ ಚೂರಿಯಿಂದ ಇರಿದು ಕೊಂದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಬಜಕಳ ಎಂಬಲ್ಲಿ ಮಾ. 6ರಂದು ಸಂಭವಿಸಿದೆ.

ಪರಿಶಿಷ್ಟ ಜಾತಿಗೆ ಸೇರಿದ ಶೇಖರ್‌ (50) ಕೊಲೆಯಾದವರು. ಅವರ ಸಹೋದರ ರಾಜು (35) ಕೊಲೆಗೈದ ಆರೋಪಿ. ಜಾಗದ ತಕರಾರಿಗೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ. ಶೇಖರ್‌ ಮತ್ತು ರಾಜು ಸಹೋದರರು ಪ್ರತ್ಯೇಕ ವಾಗಿ ವಾಸಿಸುತ್ತಿದ್ದರು.

ತಾಯಿಗೆ ಮಂಜೂರಾದ ಭೂಮಿಯಲ್ಲಿ ಅಣ್ಣ ಶೇಖರ ವಾಸವಾಗಿದ್ದರು. ಅಣ್ಣನೊಂದಿಗೆ ವೈಮನಸ್ಸಿನಿಂದ ರಾಜು ಪ್ರತ್ಯೇಕ ಶೆಡ್‌ ನಿರ್ಮಾಣ ಮಾಡಿ ವಾಸವಾಗಿದ್ದ. ರವಿವಾರ ಶೇಖರ ಮನೆಯಲ್ಲಿ ಅಂಗಳದ ಕೆಲಸದಲ್ಲಿ ನಿರತನಾಗಿದ್ದರು. ಮೂವರು ಕೆಲಸಗಾರರೊಂದಿಗೆ ಜಲ್ಲಿಯನ್ನು ಹೊತ್ತು ಮನೆಗೆ ಸಾಗಿಸುತ್ತಿದ್ದರು.

ಅಲ್ಲಿಗೆ ಪಾನಮತ್ತನಾಗಿ ಆಗಮಿಸಿದ ರಾಜು ಮನೆಯಲ್ಲಿ ದುರಸ್ತಿ ಕೆಲಸ ಮಾಡದಂತೆ ಆಕ್ಷೇಪಿಸಿದ್ದ. ಅದಕ್ಕೆ ಶೇಖರ ಕಿವಿಗೊಡದೆ ತನ್ನ ಪಾಡಿಗೆ ಕೆಲಸ ಮುಂದುವರಿಸಿದ್ದರು. ನಿನಗೆ ಕಲಿಸುತ್ತೇನೆ ಎಂದು ಬೆದರಿಕೆಯೊಡ್ಡಿ ತನ್ನ ಮನೆಗೆ ತೆರಳಿದ ರಾಜು ಚೂರಿಯನ್ನು ಜತೆಗೆ ತಂದು ಅಣ್ಣನ ಕುತ್ತಿಗೆ ಮತ್ತು ಹೊಟ್ಟೆಯ ಭಾಗಕ್ಕೆ ತಿವಿದಿದ್ದಾನೆ. ಗಂಭೀರ ಗಾಯಗೊಂಡು ಅತೀವ ರಕ್ತಸ್ರಾವದಿಂದ ಶೇಖರ ಮೃತಪಟ್ಟಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು ಗ್ರಾಮಾಂತರ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು