Categories: ಉಡುಪಿ

ಕಾಲೇಜು ಹಂತದಲ್ಲಿಯೇ ಸ್ವಂತ ಉದ್ಯೋಗದ ಮಾಹಿತಿ ನೀಡಿ : ಸದಾಶಿವ ಪ್ರಭು

ಉಡುಪಿ :  ಸ್ವಂತ ಉದ್ಯೋಗ ಮಾಡಲು ಬಯಸುವ ಯುವ ಜನತೆಗೆ ಕಾಲೇಜು ಹಂತದಲ್ಲಿಯೇ ಸ್ವ ಉದ್ಯೋಗ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ನೆಹರೂ ಯುವ ಕೇಂದ್ರದ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಸದಾಶಿವ ಪ್ರಭು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನೆಹರೂ ಯುವ ಕೇಂದ್ರದ ವಾರ್ಷಿಕ ಕ್ರಿಯಾ ಯೋಜನೆ ಅನುಷ್ಠಾನ ಕುರಿತ ಸಭೆಯಲ್ಲಿ ಮಾತನಾಡಿ, ಯುವ ಜನತೆ ಪದವಿ ನಂತರ ಭವಿಷ್ಯ ಕಟ್ಟಿಕೊಳ್ಳಲು ಪೂರಕವಾಗುವಂತೆ, ಅಂತಿಮ ವರ್ಷದ ಪದವಿ ಓದುವಾಗಲೇ ಸ್ವ ಉದ್ಯೋಗಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಯಕ್ರಮ ಆಯೋಜಿಸಬೇಕು.
ಕಾರ್ಯಕ್ರಮಗಳಿಗೆ ಲೀಡ್‌ ಬ್ಯಾಂಕ್‌ ಅಧಿಕಾರಿಗಳನ್ನು ಆಹ್ವಾನಿಸಿ, ಸ್ವಯಂ ಉದ್ಯೋಗಕ್ಕೆ ಬ್ಯಾಂಕ್‌ಗಳು ನೀಡುವ ವಿವಿಧ ಬಗೆಯ ಸಾಲಗಳ ಮಾಹಿತಿ, ಸಬ್ಸಿಡಿ ಮೊತ್ತದ ಬಗ್ಗೆ ಸಮಗ್ರ ವಿವರಗಳನ್ನು ನೀಡಬೇಕು ಎಂದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸ್ವಉದ್ಯೋಗಕ್ಕೆ ಅನುಕೂಲವಾಗುವಂತೆ ಇರುವ ಯೋಜನೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಮಗ್ರ ಮಾಹಿತಿ ನೀಡಬೇಕು. ಕೇಂದ್ರ ಸರ್ಕಾರ ಸ್ಟಾರ್ಟ್ ಆಯಪ್‌ಗಳನ್ನು ಆರಂಭಿಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಆತ್ಮ ನಿರ್ಭರ ಯೋಜನೆಯಡಿ ಉದ್ದಿಮೆ ಆರಂಭಿಸಲು ಅವಕಾಶಗಳಿದ್ದು, ಇದರ ಬಗ್ಗೆ ಯುವಕರಿಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಬೇಕು ಎಂದರು.
ಯುವ ಶಕ್ತಿಯನ್ನು ಜಿಲ್ಲೆಯ ಅಭಿವೃದ್ದಿಗೆ ಪೂರಕವಾಗಿ ಬಳಕೆಯಾಗುವ ಕುರಿತು ವಾರ್ಷಿಕ ಕ್ರಿಯಾ ಯೋಜನೆ ರೂಪಿಸಬೇಕು. ಪ್ರಾಕೃತಿಕ ವಿಕೋಪಗಳು ಎದುರಾದಾಗ ಸಮಾಜದ ನೆರವಿಗೆ ದಾವಿಸುವ ಬಗ್ಗೆ ಜಾಗೃತಿ ಮೂಡಿಸಬೇಕು. ಈ ಸಂಬಂಧ ಯುವಕ ಸಂಘಗಳಿಗೆ ತರಬೇತಿ ನೀಡಬೇಕು. ಗಾಂಧಿ ಜಯಂತಿಯಂದು ಜಿಲ್ಲೆಯ ಎಲ್ಲ ಬೀಚ್‌ಗಳಲ್ಲಿ ಸ್ವಚ್ಚತಾ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಲಶಕ್ತಿ ಅಭಿಯಾನ, ನಶಾ ಮುಕ್ತ ಭಾರತದಂತಹ ಕಾರ್ಯಕ್ರಮಗಳಲ್ಲಿ ಯುವಜನತೆಯ ಸಹಭಾಗಿತ್ವ ಪಡೆಯಬೇಕು ಎಂದರು.
ನೆಹರೂ ಯುವ ಕೇಂದ್ರದ ವಿಷ್ಣುಮೂರ್ತಿ ಕ್ರಿಯಾ ಯೋಜನೆಯ ವಿವರ ನೀಡಿದರು. ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಯುವಕ ಸಂಘಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
Raksha Deshpande

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

41 mins ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

58 mins ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

1 hour ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

1 hour ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

3 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

3 hours ago