ಉಡುಪಿ : ನಾಲ್ವರು ಸ್ನೇಹಿತರು ಸೇರಿ ಯಾಣ ಪ್ರವಾಸ ಮುಗಿಸಿಕೊಂಡು ತೆರಳುತ್ತಿದ್ದಂತ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ. ಈ ವೇಳ ಸ್ಥಳದಲ್ಲಿಯೇ ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ, ಬೈಂದೂರಿನಲ್ಲಿ ನಡೆದಿದೆ.
ಬೆಂಗಳೂರು ಮೂಲಕ ಅಕ್ಷಯ್, ತೇಜಸ್, ಪವನ್ ಹಾಗೂ ಹರ್ಷ ಎಂಬ ಸ್ನೇಹಿತರು ಯಾಣ ನೋಡೋದಕ್ಕಾಗಿ ಪ್ರವಾಸಕ್ಕೆ ತೆರಳಿದ್ದರು. ಯಾಣ ನೋಡಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಿರುಮಂಜೇಶ್ವರದ ಬಳಿ, ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯೊಡೆದಿದೆ.
ಹೀಗೆ ಡಿವೈಡರ್ ಗೆ ಕಾರು ಡಿಕ್ಕಿಯಾದ ಪರಿಣಾಮ, ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದಂತ ಅಕ್ಷಯ್ ಸ್ಥಳದಲ್ಲಿಯೇ ಸಾವನ್ನಪ್ಪಿದರೇ, ತೇಜಸ್, ಪವನ್, ಹರ್ಷ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…
ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್ ಸುಕೇಶ್…
ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದ ಘಟನೆ…
ಇತ್ತೀಚೆಗೆ ದೇಶದಾದ್ಯಂತ ಬಾಂಬ್ ಬೆದರಿಕೆ ಕೇಳಿಬರುತ್ತವೆ ಇದರ ಹಿಂದೆ ಯಾರ ಕೈಚಳಕವಿದೆ ಎಂದು ಇನ್ನು ಬೆಳಕಿಗೆ ಬಂದಿಲ್ಲ. ಈಗಾಗಲೇ ಶಾಲೆಗಳಿಗ,…
ಹುಬ್ಬಳ್ಳಿಯಲ್ಲಿ ಹಂತಕನ ದಾಳಿಗೆ ಬಲಿಯಾಗಿರುವ ಅಂಜಲಿ ಅಂಬಿಗೇರ ಕುಟುಂಬಕ್ಕೆ ಭಾರಿ ಸಿಡಿಲು ಬಡಿದಿದೆ.
ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿ ಮತ್ತು ಇತರ…