News Karnataka Kannada
Monday, May 06 2024
ಉಡುಪಿ

 ನಾರಾಯಣ ಗುರು ಹೆಸರಿನಲ್ಲಿ ಕೇರಳ ರಾಜಕೀಯ ಮಾಡುತ್ತಿದೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Kota Shrinivasa Poojari
Photo Credit :

ಉಡುಪಿ : ನಾರಾಯಣಗುರುಗಳ ಸ್ತಬ್ಧಚಿತ್ರದ ವಿಚಾರವಾಗಿ ಕೇರಳ ಸರ್ಕಾರ ರಾಜಕೀಯ ಮಾಡುತ್ತಿದೆ. ಅನವಶ್ಯಕವಾಗಿ ಕೇಂದ್ರ ಸರ್ಕಾರದ ವಿರುದ್ಧ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ನಾರಾಯಣಗುರುಗಳ ಸ್ತಬ್ಧಚಿತ್ರವನ್ನು ಗಣರಾಜ್ಯೋತ್ಸವ ಪೆರೇಡ್ ನಿಂದ ದೂರ ಇಟ್ಟ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ, ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾರಾಯಣ ಗುರುಗಳ ಮೇಲೆ ವಿಶೇಷ ಗೌರವ ಇದೆ.

ಕೇರಳದಲ್ಲಿ ನಾರಾಯಣಗುರುಗಳ ಭಾವಚಿತ್ರಕ್ಕೆ ಗೌರವ ನೀಡಿ ,ನಾರಾಯಣಗುರುಗಳ ವಿಚಾರಧಾರೆ ದೇಶಕ್ಕೆ ಮಾತ್ರವಲ್ಲ, ವಿಶ್ವಕ್ಕೇ ಮಾದರಿ ಎಂದು ಹೇಳಿದವರು ಪ್ರಧಾನಿ ಮೋದಿ. ಮೂರು ವರ್ಷಕ್ಕೊಮ್ಮೆ ರಾಜ್ಯಗಳು ತನ್ನ ಸ್ತಬ್ಧಚಿತ್ರ ಕಳಿಸುವ ಸಂಪ್ರದಾಯ ನಡೆದುಕೊಂಡು ಬಂದಿದೆ.

ಇದು ಗೊತ್ತಿದ್ದೂ ಕೂಡ ಕೇರಳ ಸರ್ಕಾರ ನಿಯಮವನ್ನು ಮೀರಿ ನಾರಾಯಣಗುರುಗಳ ಸ್ತಬ್ಧಚಿತ್ರ ಕಳಿಸಿದೆ.ಈ ಮೂಲಕ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಇದಕ್ಕೆ ಕೆಲವು ಕಾಂಗ್ರೆಸ್ ನಾಯಕರು ಕೂಡ ಕೈಜೋಡಿಸುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು