ಉಡುಪಿ

ನಿಷೇಧಿತ ಆ್ಯಪ್ ಬಳಸಿ ವಂಚನೆ-ಮಂಡಗೋಡದ ಲಾಮಾಗಳ ಬಂಧನ

ಕಾರವಾರ: ಉತ್ತರ‌ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಟಿಬೆಟಿಯನ್ ಕ್ಯಾಂಪಿನಲ್ಲಿ  ಇಬ್ಬರು ಬೌದ್ಧ ಸನ್ಯಾಸಿಗಳಿಗೆ ನಿಷೇಧಿತ ಚೀನಾ ಆ್ಯಪ್  ಬಳಸಿ ಜನರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರ ಸೈಬರ್ ಪೊಲೀಸರು ಬಂಧಿಸಿದ್ದಾರೆ. ಟಿಬೆಟಿಯನ್ ಕ್ಯಾಂಪ್‌ನ ಲೊಬಾಸಾಂಗ್ ಸಾಂಗ್ಯ (24), ದಕಪ ಪುಂದೆ (40) ಎಂಬುವರು ಬಂಧಿತರಾಗಿದ್ದಾರೆ.
ಆರೋಪಿ ಟಿಬೇಟಿಯನ್ನ ಸಿವಿಲೀಯನ್ ವ್ಯಕ್ತಿ ನಾಪತ್ತೆಯಾಗಿದ್ದು ಅವನ ಬಂಧಿಸಲು ಮಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪಿಎಸ್‌ಐ ನೇತೃತ್ವದ ತಂಡ ತಾಲೂಕಿನ ಟಿಬೆಟಿಯನ್ ಕ್ಯಾಂಪ್‌ಗೆ ಆಗಮಿಸಿದ್ದು ಓರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಮಂಗಳೂರಿನ ವ್ಯಕ್ತಿಯೊಬ್ಬರು ಎಸ್‌ಬಿಐ ಬ್ಯಾಂಕ್‌ನ ಕ್ರೆಡಿಟ್ ಕಾರ್ಡನ್ನು ಮೂರು ವ? ಗಳಿಂದ ಬಳಕೆ ಮಾಡುತ್ತಿದ್ದರು. ಆದರೆ ಸದ್ಯ ಆ ಕ್ರೆಡಿಟ್ ಕಾರ್ಡನ ಸೇವಾ ಶುಲ್ಕು ಆರು ಸಾವಿರ ರೂ. ಪಾವತಿಸಬೇಕಾಗಿರುವುದರಿಂದ ಕಾರ್ಡನ್ನು ಮಾರ್ಚ್ 23ರಂದು ಕ್ರೆಡಿಟ್ ಕಾರ್ಡನ್ನು ಅವರು ಬ್ಯಾಂಕ್‌ಗೆ ಒಪ್ಪಿಸಿದರು.
ಆದರೆ ಮಾರ್ಚ್ 27ರಂದು ಅವರ ಖಾತೆಯಿಂದ ಈ ಮೂರು ಜನ ಟಿಬೆಟಿಯನ್ ಆರೋಪಿಗಳು ಒಂದು ಲಕ್ಷದ ಹನ್ನೇರಡು ಸಾವಿರ ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಿರುವುದು ಬ್ಯಾಂಕ್ ಸ್ಟೆಟ್‌ಮೆಂಟ್‌ನಲ್ಲಿ ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ಮಂಗಳೂರಿನ ವ್ಯಕ್ತಿ ಮಂಗಳೂರ ಸೈಬರ್ ಕ್ರೈಂ ಸೆಂಟರ್‌ಗೆ ದೂರು ಸಲ್ಲಿಸಿದ್ದರು.
ಈ ಕುರಿತು ತನಿಖೆ ಆರಂಭಿಸಿದ್ದ ಪೊಲೀಸರು ಮೊಬೈಲ್ ವಿಕಿ ವ್ಯಾಲೇಟ್ ಆ್ಯಪ್ ಮೂಲಕ ಉತ್ತರ ಪ್ರದೇಶ ಮತ್ತು ಮಹಾರಾದ ಫಿನ್ ಕೆರ್ ಸ್ಟಾಲ್ ಫೈನಾನ್ಸ್ ಬ್ಯಾಂಕ್‌ನಲ್ಲಿರುವ ಎರಡು ಖಾತೆಗಳಿಗೆ ಮತ್ತು ಆರೋಪಿ ಲೊಬಾಸಾಂಗ್ ಅವರ ಕೆನರಾ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿರುವುದು ಕಂಡು ಬಂದಿದೆ.
ಈ ಬಗ್ಗೆ ತನಿಖೆ ಮುಂದುವರೆಸಿದ ಪೊಲೀಸರಿಗೆ ಮತ್ತೊಬ್ಬ ಆರೋಪಿ ದಕಪಾ ಪುಂದೆ ಚೀನಾದ ನಿ? ಧಿತ ಆಪ್‌ಗಳಾದ ವಿ.ಚಾಟ್, ರೆಡ್ ಪ್ಯಾಕ್ ಮುಂತಾದವುಗಳ ಮೂಲಕ ಹವಾಲಾ ರೀತಿಯಲ್ಲಿ ಹಣವನ್ನು ವರ್ಗಾವಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಬಂಧಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರ 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರ ಪಡಿಸಿದ್ದಾರೆ ಎನ್ನಲಾಗಿದೆ. ಇನ್ನೊಬ್ಬ ಆರೋಪಿಗಾಗಿ ತಾಲೂಕಿನ ಟಿಬೆಟಿಯನ್ ಕ್ಯಾಂಪ್‌ನಲ್ಲಿ ಮಂಗಳೂರು ಸೈಬರ್ ಪೊಲೀಸರು ಬೀಡು ಬಿಟ್ಟು ಹುಡುಕಾಟ ನಡೆಸಿದ್ದಾರೆ. ಆದರೆ ಆರೋಪಿ ನಾಪತ್ತೆಯಾಗಿದ್ದಾನೆ.
Sneha Gowda

Recent Posts

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

19 mins ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

33 mins ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

52 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

1 hour ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

2 hours ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

2 hours ago