Categories: ಉಡುಪಿ

ಪ್ರೀತಿಸಿದ ಯುವತಿಯನ್ನು ಕೊಂದ ಪ್ರೇಮಿ

ಉಡುಪಿ : ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಳು ಎಂಬ ಕಾರಣಕ್ಕೆ ಪ್ರೇಮಿಯೊಬ್ಬ ಅವಳಿಗೆ ಚಾಕುವಿನಿಂದ ಇರಿದು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ  ಅಂಬಾಗಿಲು ಸಮೀಪದ ಸಂತೆಕಟ್ಟೆಯ ಪೆಟ್ರೋಲ್‌ ಬಂಕ್‌ ಬಳಿಯಲ್ಲಿ ಘಟನೆ ನಡೆದಿದೆ.

ಸೌಮ್ಯಶ್ರೀ ಭಂಡಾರಿ ಇರಿತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಸೌಮ್ಯಳಿಗೆ ಚೂರಿ ಇರಿದು, ತಾನು ಕತ್ತು ಕೊಯಿದುಕೊಂಡ ಸಂದೇಶ್ ಕುಲಾಲ್ ಪರಿಸ್ಥಿತಿ ಚಿಂತಾಜನಕವಾಗಿದೆ.  ಸೌಮ್ಯ ಕೆಲಸ ಮುಗಿಸಿ, ಮನೆಗೆ ಹೋಗುತ್ತಿದ್ದಾಗ ಸ್ಕೂಟಿಯನ್ನು ತಡೆದ ಸಂದೇಶ್ ಪ್ರಶ್ನೆ ಮಾಡಿದ್ದಾನೆ.

ಪೆಟ್ರೋಲ್‌ ಬಂಕ್‌ ನಿಂದ ಸ್ವಲ್ಪ ಮುಂದಕ್ಕೆ ಬರುತ್ತಿದ್ದಂತೆಯೇ ಪರಸ್ಪರ ಜಗಳಕ್ಕೆ ಇಳಿದಿದ್ದಾರೆ. ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪ್ರೇಯಸಿಗೆ ಯುವಕ ಚಾಕುವಿನಿಂದ ಇರಿದಿದ್ದಾನೆ. ನಂತರದ ಯುವತಿ ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆಯೇ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯುವತಿ ಪ್ರಾಣ ಬಿಟ್ಟಿದ್ದಾಳೆ. ಯುವಕನ ಸ್ಥಿತಿಯೂ ಚಿಂತಾಜನಕವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ವಾರದ ಹಿಂದೆ ಯುವತಿಗೆ ನಿಶ್ಚಿತಾರ್ಥ ಆಗಿತ್ತು, ಇದರಿಂದ ಕೋಪಗೊಂಡ ಯುವಕ ಕೃತ್ಯ ಎಸಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Raksha Deshpande

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

11 mins ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

28 mins ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

39 mins ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

55 mins ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

2 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

3 hours ago