News Karnataka Kannada
Thursday, May 02 2024
ಉಡುಪಿ

ರಾಜಕೀಯ ಜೀವನದಲ್ಲಿ ಓಸ್ಕರ್ ತಾಯಿಗೆ ಸಮಾನ : ರಮಾನಾಥ ರೈ 

New Project 2021 10 21t130301.044
Photo Credit :
ಉಡುಪಿ : ಅವಿಭಜಿತ ಜಿಲ್ಲೆಯಲ್ಲಿ ಓಸ್ಕರ್ ಫೆರ್ನಾಂಡಿಸ್ ಮಾಡಿದಂತಹ ಅಭಿವೃದ್ದಿ ಕೆಲಸಗಳು ಅವಿಸ್ಮರಣೀಯ. ರಾಜಕೀಯ ಎದುರಾಳಿಗಳನ್ನು ವೈರಿಗಳಂತೆ ಕಾಣದೆ, ಅವರೆಲ್ಲರನ್ನು ಪ್ರೀತಿಸಿದ ಓಸ್ಕರಣ್ಣ, ದೇಶದಲ್ಲಿ ಹಲವಾರು ನಾಯಕರನ್ನು ಸಾರ್ವಜನಿಕ ಜೀವನದಲ್ಲಿ ಬೆಳೆಸಿದವರು ಓಸ್ಕರ್ ಫೆರ್ನಾಂಡಿಸ್. ನಮ್ಮೆಲ್ಲರ ಸಾರ್ವಜನಿಕ ಬದುಕಿನಲ್ಲಿ ಓಸ್ಕರ್ ಫೆರ್ನಾಂಡಿಸ್ ತಾಯಿಗೆ ಸಮಾನರು ಎಂದು ಮಾಜಿ ಸಚಿವ ರಮಾನಾಥ ರೈ ತಿಳಿಸಿದರು.
ದಿ. ಓಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ನೇತೃತ್ವದಲ್ಲಿ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವಠಾರದಲ್ಲಿ ನಡೆದ ‘ನುಡಿ ನಮನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಉಡುಪಿ ಶಾಸಕ ರಘುಪತಿ ಭಟ್ ಮಾತನಾಡಿ, ಜಿಲ್ಲೆಯಲ್ಲಿ ದೀರ್ಘಾವಧಿ ರಾಜಕೀಯ ನಾಯಕನಾಗಿ ಪ್ರಜ್ವಲಿಸಿದವರು ಓಸ್ಕರ್ ಫೆರ್ನಾಂಡಿಸ್. ದೆಹಲಿಯ ತನ್ನ ಕಚೇರಿಯಲ್ಲಿ ತಡರಾತ್ರಿಯವರೆಗೂ ಜನರ ಸಂಪರ್ಕಕ್ಕೆ ಸಿಗುತ್ತಿದ್ದ ಓಸ್ಕರ್ ಸಮಸ್ತ ಜನಪ್ರತಿನಿಧಿಗಳಿಗೆ ಪ್ರೇರಣೆ. ಓಸ್ಕರ್ ಫೆರ್ನಾಂಡಿಸ್ ರವರು ಮಾನವೀಯ ನೆಲೆ ಅವರ ಮೇಲೆ ನನಗೆ ಪ್ರೇರಣೆಯಾಗಲು ಕಾರಣ. ನನ್ನ ವೈಯಕ್ತಿಕ ಜೀವನದಲ್ಲಿ ತೀರಾ ಕಷ್ಟದಲ್ಲಿದ್ದಾಗ ಓಸ್ಕರ್ ಫೆರ್ನಾಂಡಿಸ್ ನನಗೆ ಸಾಂತ್ವನ ಹೇಳಿತು ಮರೆಯಲಾರದ್ದು. ಉಡುಪಿ ಜಿಲ್ಲೆ ಅಭಿವೃದ್ಧಿಗೆ ಮತ್ತು ರಾಜಕೀಯಕ್ಕೆ ಒಳ್ಳೆಯ ವ್ಯಕ್ತಿಯನ್ನು ಕಳೆದುಕೊಂಡಿದೆ ಎಂದರು.
ಮಾಜಿ ಸಚಿವ ರಮಾನಾಥ ರೈ ಮಾತನಾಡುತ್ತಾ, ಓಸ್ಕರ್ ಫೆರ್ನಾಂಡಿಸ್ ಧರ್ಮ ಮತ್ತು ರಾಜಕೀಯ ಮೀರಿ ಬೆಳೆದವರು. ನೆಹರು ಕುಟುಂಬಕ್ಕೆ ಹತ್ತಿರವಾಗಿದ್ದ ಅವರು ಜನರ ಪ್ರೀತಿ ವಿಶ್ವಾಸಕ್ಕೆ ಕಾರಣಕರ್ತರಾಗಿದ್ದರು. ಅವರಲ್ಲಿದ್ದ ಕಠಿಣ ಶ್ರಮ, ನಂಬಿಕೆ, ವಿಶ್ವಾಸ ರಾಷ್ಟ್ರದ ಪ್ರಭಾವಿ ವ್ಯಕ್ತಿಯಾಗಿ ಬೆಳೆಯಲು ಕಾರಣ. ಅವಿಭಜಿತ ಜಿಲ್ಲೆಯಲ್ಲಿ ಮಾತ್ರವಲ್ಲದೆ ದೇಶದಲ್ಲಿಯೇ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೂ, ಯಾವುದೇ ಪ್ರಚಾರವನ್ನು ಬಯಸದೆ ಬೆಳೆದ ರಾಜಕಾರಣಿ ಓಸ್ಕರ್ ಫೆರ್ನಾಂಡಿಸ್. ದೇಶದಲ್ಲಿ ಕಾರ್ಮಿಕರಿಗೆ ವಿವಿಧ ಸವಲತ್ತುಗಳ ಸಹಿತ 8 ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕಾರಣಕರ್ತರು. ದೇಶದಲ್ಲಿ ಹಲವಾರು ಅಭಿವೃದ್ಧಿಗೆ ಕಾರಣಕರ್ತರಾಗಿರುವ ಓಸ್ಕರ್ ಫೆರ್ನಾಂಡಿಸ್ ಅವರ ವ್ಯಕ್ತಿತ್ವ ಶಾಶ್ವತ ಎಂದರು.
ದಿವಂಗತ ಓಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ಅಧ್ಯಕ್ಷ ಮತ್ತು ಉದ್ಯಮಿ ರೊನಾಲ್ಡ್ ಮನೋಹರ್ ಕರ್ಕಡ ಮಾತನಾಡಿ, ಸರಳ ಸಜ್ಜನಿಕೆಯ ರಾಜಕಾರಣಿಯಾಗಿದ್ದ ಓಸ್ಕರ್ ಧರ್ಮ ಮತ್ತು ಪಕ್ಷವನ್ನು ಮೀರಿ ಬೆಳೆದವರು. ತನ್ನ ಪಕ್ಷದವರನ್ನು ಮಾತ್ರವಲ್ಲದೆ ಇತರ ಪಕ್ಷದವರನ್ನು ಗೌರವಿಸುತ್ತಿದ್ದ ಓಸ್ಕರ್ ಪುಸ್ತಕ ಕಾಲದ ರಾಜಕಾರಣಿಗಳಿಗೆ ಮಾದರಿ. ಉದ್ಯಾವರದಂತಹ  ಸಣ್ಣ ಗ್ರಾಮದಲ್ಲಿ ಬೆಳೆದು ದೆಹಲಿಯ ವರೆಗೂ ಪ್ರಭಾವಿ ರಾಜಕಾರಣಿಯಾಗಿ ಬೆಳೆದದ್ದು ಅವಿಸ್ಮರಣೀಯ. ತಾನು ಮಾಡಿದ ಹಲವು ಅತ್ಯಂತ ಪ್ರಭಾವಿ ಕೆಲಸಗಳನ್ನು ಯಾವುದೇ ಪ್ರಚಾರ ಬಯಸದೆ ಮಾಡಿದವರು. ಹಲವು ಯುವಕರಿಗೆ ಉದ್ಯೋಗದ ವ್ಯವಸ್ಥೆ, ಜತೆಗೆ ಸಂಕಷ್ಟದಲ್ಲಿದ್ದ ಹಲವಾರು ಕುಟುಂಬಗಳಿಗೆ ಆಸ್ಕರ್ ಆಸರೆಯಾಗಿದ್ದರು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಭಯಚಂದ್ರ ಜೈನ್, ಪ್ರಮೋದ್ ಮಧ್ವರಾಜ್, ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಶ್ರೀಯಾನ್, ಉಡುಪಿ ಧರ್ಮಪ್ರಾಂತ್ಯದ ಕುಲಪತಿ ಅ. ವಂ. ಫಾ. ಸ್ಟ್ಯಾನಿ ಬಿ ಲೋಬೊ, ಆದರ್ಶ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಚಂದ್ರಶೇಖರ್, ನಾಗೇಶ್ ಕುಮಾರ್ ಉದ್ಯಾವರ, ಎಂ ಎ ಗಪೂರ್, ಬಿಪಿನ್ ರಾವ್, ಓಸ್ಕರ್ ಫೆರ್ನಾಂಡಿಸ್ ಅವರ ಸೊಸೆ ಫ್ರೆಜಿಲ್ ಫೆರ್ನಾಂಡಿಸ್ ಮತ್ತಿತರರು ನುಡಿನಮನ ಸಲ್ಲಿಸಿದರು.
 ವಿಧಾನಪರಿಷತ್ ಮಾಜಿ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಕಾರ್ಪೊರೇಟರ್ ನವೀನ್ ಡಿಸೋಜಾ, ವಂ. ಫಾ. ವಿಲಿಯಂ ಮಾರ್ಟಿಸ್, ಪ್ರಮುಖರಾದ ದಿನೇಶ್ ಪುತ್ರನ್, ಡೆರಿಕ್ ಡಿಸೋಜ, ನವೀನ್ ಚಂದ್ರ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಮೇರಿ ಡಿಸೋಜ, ಹರೀಶ್ ಶೆಟ್ಟಿ, ರೋಶನಿ ಒಲಿವೆರಾ, ಅನಿತಾ ಡಿಸೋಜಾ, ದೀಪಕ್ ಹೆಗ್ಡೆ, ಮೇರಿ ಡಿಸೋಜಾ, ನೇರಿ ಕರ್ನೇಲಿಯೊ, ಅರ್ವಿಂದ್ ಫೆರ್ನಾಂಡಿಸ್, ರೋಯ್ಡನ್ ರೊಡ್ರಿಗಸ್ ಮತ್ತಿತರರು ಉಪಸ್ಥಿತರಿದ್ದರು.
ನುಡಿನಮನ ಕಾರ್ಯಕ್ರಮಕ್ಕೂ ಮೊದಲು ಪವಿತ್ರ ಬಲಿಪೂಜೆ ಮತ್ತು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಬಲಿಪೂಜೆಯ ನೇತೃತ್ವವನ್ನು ನಿವೃತ್ತ ಧರ್ಮಗುರು ವಂ. ಫಾ. ಝೇವಿಯರ್ ಪಿಂಟೊ ನೆರವೇರಿಸಿದರೆ, ಮಂಗಳೂರು ದಕ್ಷಿಣದ  ಮಾಜಿ ಶಾಸಕ ಜೆ ಆರ್ ಲೋಬೊ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದರು.
ದಿವಂಗತ ಓಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ಸಂಘಟಕ ಮೊಹಮ್ಮದ್ ಶ್ರೀಶ್ ಸ್ವಾಗತಿಸಿದರೆ,  ಸಂಚಾಲಕ ಸ್ಟೀವನ್ ಕುಲಾಸೊ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಆಲ್ವಿನ್ ದಾಂತಿ ಕಾರ್ಯಕ್ರಮ ನಿರೂಪಿಸಿದರು.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು