Categories: ಉಡುಪಿ

ಶೀಘ್ರದಲ್ಲೇ ಕಲ್ಲಿದ್ದಲು ಸಮಸ್ಯೆಗೆ ಪರಿಹಾರ : ಸುನೀಲ್ ಕುಮಾರ್

ಉಡುಪಿ : ಮಳೆಗಾಲದಲ್ಲಿ  ಕಲ್ಲಿದ್ದಲು ಗಣಿಗಳು ಸ್ಥಗಿತಗೊಂಡಿರುವುದಂದ ಉಷ್ಣವಿದ್ಯುತ್‌ ಸ್ಥಾವರಗಳಿಗೆ ಕಲ್ಲಿದ್ದಲು ಪೂರೈಕೆ ಕೊರತೆಯಾಗಿದ್ದು ಮೂರ್ನಾಲ್ಕು ದಿನಗಳಲ್ಲೇ ಈ ಸಮಸ್ಯೆ ಬಗೆಹರಿಯಲಿದೆ ಎಂಬುದಾಗಿ ಇಂಧನ ಸಚಿವ ಸುನಿಲ್‌ ಕುಮಾರ್‌  ತಿಳಿಸಿದ್ದಾರೆ.

ಕಲ್ಲಿದ್ದಲು ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಶಾಖೋತ್ಪನ್ನ ವಿದ್ಯುತ್‌ ಘಟಕಗಳಲ್ಲಿ ವಿದ್ಯುತ್‌ ಉತ್ಪಾದನಾ ಕಾರ್ಯಕ್ಕೆ ಸಮಸ್ಯೆಯಾಗಿರುವ ಬಗ್ಗೆ ನಗರದಲ್ಲಿ ಶುಕ್ರವಾರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು. ನಾನು ಮತ್ತು ಮುಖ್ಯಮಂತ್ರಿಗಳು ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಿದ್ದೇವೆ, ಅಧಿಕಾರಿಗಳು ಕೂಡ ನಿರಂತರ ಸಂಪರ್ಕದಲ್ಲಿದ್ದು ಶೀಘ್ರದಲ್ಲೇ  ಕಲ್ಲಿದ್ದಲು ಪೂರೈಕೆಗೆ ವ್ಯವಸ್ಥೆ ಮಾಡುತ್ತೇವೆ. ರಾಜ್ಯದ ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದರು.

ಮಳೆಗಾಲವಾಗಿರುವುದರಿಂದ ದೇಶಾದ್ಯಂತ ಕಲ್ಲಿದ್ದಲು ಗಣಿಗಳು ಸ್ಥಗಿತಗೊಂಡಿವೆ. ಆದ್ದರಿಂದ ಕರ್ನಾಟಕದ ರಾಯಚೂರು  ಮತ್ತು ಬಳ್ಳಾರಿ  ಉಷ್ಣವಿದ್ಯುತ್‌ ಸ್ಥಾವರಕ್ಕೆ ಕಲ್ಲಿದ್ದಲು ಪೂರೈಕೆ ಕೊರತೆಯಾಗಿದೆ. ನಾನು ಮತ್ತು ಮುಖ್ಯಮಂತ್ರಿಗಳು ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಿದ್ದೇವೆ. ನಾನು ಬೆಳಗ್ಗೆ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಿದ್ದೆ. ರಾತ್ರಿಯೂ ಮಾತನಾಡುತ್ತೇನೆ. ಮುಖ್ಯಮಂತ್ರಿ ಬೊಮ್ಮಾಯಿ  ದೆಹಲಿ  ಪ್ರವಾಸದಲ್ಲಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂದರು.

ಮಹಾರಾಷ್ಟ್ರ ಮತ್ತು ಒಡಿಶಾದಿಂದ  ನಮಗೆ ಬರಬೇಕಾದ ಕಲ್ಲಿದ್ದಲು ನೀಡುವಂತೆ ಮನವಿ ಮಾಡಲಾಗಿದೆ. 4 – 5 ದಿನಗಳಲ್ಲಿ ಸಮಸ್ಯೆ ಬಗೆಹರಿಯಲಿದೆ. ಜನರಿಗೆ ತೊಂದರೆಯಾಗದಂತೆ ನಿರ್ವಹಣೆ ಮಾಡಲಾಗುತ್ತದೆ ಎಂದು ಸುನಿಲ್‌ ಕುಮಾರ್‌ ಹೇಳಿದರು.

Raksha Deshpande

Recent Posts

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

7 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

13 mins ago

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

24 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

35 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

45 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

51 mins ago