News Karnataka Kannada
Tuesday, May 14 2024
ಉಡುಪಿ

ಶ್ರದ್ಧಾ ಕೇಂದ್ರಗಳ ರಕ್ಷಣೆ ನಮ್ಮ ಜವಾಬ್ದಾರಿ : ಶೋಭಾ ಕರಂದ್ಲಾಜೆ

Shobha 21082021
Photo Credit :

ಉಡುಪಿ: ಶ್ರದ್ಧಾ ಕೇಂದ್ರಗಳ ರಕ್ಷಣೆ ನಮ್ಮ ಜವಾಬ್ದಾರಿ. ಅಕ್ರಮ ಸ್ಥಳದಲ್ಲಿ ಶ್ರದ್ಧಾ ಕೇಂದ್ರಗಳಿದ್ದರೆ ಪೂರ್ವ ಸೂಚನೆ ನೀಡಬೇಕು ಎಂದು ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ದೇವಸ್ಥಾನ ಧ್ವಂಸ- ಹಿಂದು ಸಂಘಟನೆಗಳ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದರು.

ದೇವಸ್ಥಾನ, ಮಸೀದಿ, ಚರ್ಚುಗಳು ನಮ್ಮ ಶ್ರದ್ಧಾ ಕೇಂದ್ರಗಳಾಗಿವೆ. ಶ್ರದ್ಧಾ ಕೇಂದ್ರಗಳ ಬಗ್ಗೆ ಜನರ ನಂಬಿಕೆ ಜಾಸ್ತಿ ಇರುತ್ತದೆ. ಭಕ್ತಿ ಭಾವ, ಪ್ರೀತಿ ಜಾಸ್ತಿ ಇರುತ್ತದೆ. ಭಾವನೆಗೆ ನೋವಾದಾಗ ಪ್ರತಿಭಟನೆ ನಡೆಸುತ್ತಾರೆ. ಯಾವುದೇ ಸಮುದಾಯ ಅಥವಾ ಧರ್ಮಕ್ಕೆ ನೋವುಂಟು ಮಾಡಿದರೆ ನಮಗೆ ಒಳ್ಳೆಯದಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಅಕ್ರಮ ದೇವಾಲಯ ಕಂಡು ಬಂದರೆ ಸ್ಥಳೀಯ ಊರಿನ ಜನರ ಮನವೊಲಿಸಬೇಕು. ಅದಕ್ಕೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕು. ಆನಂತರ ತೆರವು ಮಾಡುವ ಬಗ್ಗೆ ಸರಕಾರ ಯೋಚಿಸಬೇಕು ಇದು ರಾಜ್ಯ ಸರಕಾರಕ್ಕೆ ನನ್ನ ಪ್ರಾರ್ಥನೆ ಎಂದು ಸಚಿವ ಶೋಭಾ ಕರಂದ್ಲಾಜೆ ಭಿನ್ನವಿಸಿದರು.

ದೇಶ ಸ್ವಾಗತಿಸಲಿದೆ ಪ್ರಧಾನಿ ನಿರ್ಧಾರ!
ಜಿ.ಎಸ್.ಟಿ. ವ್ಯಾಪ್ತಿಗೆ ಪೆಟ್ರೋಲ್ ವಿಚಾರವಾಗಿ ಪ್ರತಿಯಿಸಿದ ಶೋಭಾ ಕರಂದ್ಲಾಜೆ, ಇಂದು ಲಖನೌನಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಜಿ.ಎಸ್.ಟಿ. ವ್ಯಾಪ್ತಿಗೆ ಪೆಟ್ರೋಲ್ ಬಂದರೆ ಜನರಿಗೆ ಅನುಕೂಲ ಆಗಬಹುದು. ಪ್ರಧಾನಿ ನರೇಂದ್ರ ಮೋದಿ ಈ ಪ್ರಯತ್ನದಲ್ಲಿದ್ದಾರೆ. ಇವತ್ತು ಕೈಗೊಳ್ಳಬಹುದಾದ ನಿರ್ಧಾರವನ್ನು ದೇಶ ಸ್ವಾಗತಿಸುತ್ತದೆ‌ ಎಂಬ ನಂಬಿಕೆ ನನಗಿದೆ ಎಂದರು.
ಮತಾಂತರ ತಡೆ ಕಾನೂನಿಗೆ ಆಗ್ರಹ

ಕೇವಲ ಕರಾವಳಿ ಮಾತ್ರವಲ್ಲ, ದೇಶದ ಇತರ ಭಾಗದಲ್ಲೂ ಮತಾಂತರ ನಡೆಯುತ್ತಿದೆ. ಹಿಂದುಗಳ ದುರ್ಬಲತೆಯನ್ನು ದುರುಪಯೋಗಪಡಿಸಿಕೊಂಡು ಮತಾಂತರ ಮಾಡಲಾಗುತ್ತಿದೆ. ಮತಾಂತರ ಕುರಿತ ಕಾನೂನು ವ್ಯವಸ್ಥೆ ಗಟ್ಟಿಯಾಗಬೇಕು. ಅದನ್ನು ತಡೆಯಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಈ ಕುರಿತು ಸರಕಾರವನ್ನು ನಾನು ಆಗ್ರಹಿಸುತ್ತೇನೆ ಎಂದು ಕ್ರಿಶ್ಚಿಯನ್ ಮಿಷನರಿಗಳಿಂದ ಮತಾಂತರ ವಿಚಾರವಾಗಿ ಕೇಳಿದ ಪ್ರಶ್ನೆಗೆ ಶೋಭಾ ಕರಂದ್ಲಾಜೆ ಉತ್ತರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು