News Karnataka Kannada
Thursday, April 25 2024
ಉಡುಪಿ

ಶೌಚಾಲಯದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಕೇಸ್: 3 ವಿದ್ಯಾರ್ಥಿನಿಯರು ಸಸ್ಪೆಂಡ್

3 girl students suspended for shooting mobile phones in toilet
Photo Credit : News Kannada

ಉಡುಪಿ: ಖಾಸಗಿ ಕಾಲೇಜಿನ ಲೇಡಿಸ್ ಶೌಚಾಲಯದಲ್ಲಿ ಮೊಬೈಲ್ ಚಿತ್ರೀಕರಣ ಮಾಡಿದ ಆರೋಪದ ಮೇಲೆ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ. ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ಘಟನೆ ನಡೆದಿದೆ.

ಉಡುಪಿ ನಗರದ ಅಂಬಲಪಾಡಿ ಬೈಪಾಸ್ ಬಳಿ ಇರುವ ನೇತ್ರ ಜ್ಯೋತಿ ಕಾಲೇಜಿನಲ್ಲಿ ಕೆಲ ಅನ್ಯ ಕೋಮಿನ ವಿದ್ಯಾರ್ಥಿನಿಯರು ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಖಾಸಗಿ ದೃಶ್ಯಗಳನ್ನು ರೆಕಾರ್ಡ್ ಮಾಡಿ ಆ ವಿಡಿಯೋವನ್ನು ತಮ್ಮ ಕೋಮಿನ ವಿದ್ಯಾರ್ಥಿಗಳಿಗೆ ಕಳುಹಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇನ್ನು ಈ ವಿಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿತ್ತಿದ್ದರು ಎನ್ನಲಾಗಿದೆ. ಈ ಕೃತ್ಯ ಬೆಳಕಿಗೆ ಬಂದ ಬಳಿಕ ಉಳಿದ ವಿದ್ಯಾರ್ಥಿನಿಯರು ತರಾಟೆಗೆ ತೆಗೆದುಕೊಂಡಿದ್ದು ಕಾಲೇಜಿನಲ್ಲಿ ದೊಡ್ಡ ಗಲಾಟೆಯೇ ಸಂಭವಿಸಿದೆ.

ವಿಡಿಯೋ ಶೂಟ್ ಮಾಡಿದ ಮೂವರು ವಿದ್ಯಾರ್ಥಿನಿಯರ ಅಮಾನತು‌ ಮಾಡಿ ಕಾಲೇಜು ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಘಟನೆ ತಿಳಿಯುತ್ತಿದ್ದಂತೆ ಕಾಲೇಜಿಗೆ ತೆರಳಿದ್ದ ಹಿಂದೂ ಸಂಘಟನೆಗಳು ಸೂಕ್ತ ಕ್ರಮಕ್ಕೆ ಆಗ್ರಹಿಸಿವೆ. ಆದ್ರೆ ಕಾಲೇಜು ಆಡಳಿತ ಮಂಡಳಿ ಇದುವರೆಗೂ ಪ್ರಕರಣ ದಾಖಲಿಸಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು