ಉಡುಪಿ: ಮಲ್ಪೆ ಮೀನು ವ್ಯಾಪಾರಸ್ಥರ ಸಂಘದ 37 ನೇ ವಾರ್ಷಿಕ ಮಹಾಸಭೆಯು ಮಲ್ಪೆ ಬಂದರಿನ ಸಂಘದ ಕಚೇರಿಯಲ್ಲಿ ಇಂದು ನಡೆಯಿತು.
ಮಹಾಸಭೆಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭಾಗವಹಿಸಿ, ಸಂಘದ ಕಾರ್ಯಚಟುವಟಿಕೆಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ವತಿಯಿಂದ ನೂತನ ಶಾಸಕ ಯಶ್ ಪಾಲ್ ಸುವರ್ಣ ಅವರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.