News Karnataka Kannada
Saturday, April 27 2024
ಉಡುಪಿ

ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಶಿರ್ವ ಗ್ರಾಮದ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಸಭೆ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದಾಗಿ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Photo Credit : NewsKarnataka

ಉಡುಪಿ: ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಶಿರ್ವ ಗ್ರಾಮದ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಸಭೆ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದಾಗಿ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರ್ಚ್ 26ರಂದು ರಾತ್ರಿ 11.30ರ ಸುಮಾರಿಗೆ ಜಯಪ್ರಕಾಶ್ ಹೆಗ್ಡೆ ಶಿರ್ವ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಸಾರ್ವಜನಿಕರೊಂದಿಗೆ ಸಭೆ ನಡೆಸಿ ಹೋಗಿರುವುದಾಗಿ ಕಾಪು ಪೈಯಿಂಗ್ ಸ್ಕಾಡ್ ಟೀಮ್ ಗೆ ಮಾಹಿತಿ ಬಂದಿತ್ತು. ಅದರಂತೆ ತಂಡ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೈವಸ್ಥಾನದ ಆಡಳಿತ ಮಂಡಳಿಯವರು ತಡರಾತ್ರಿಯವರೆಗೆ ಕಾರ್ಯಕ್ರಮ ನಡೆಸಿರುವುದು ಮತ್ತು ಈ ಧಾರ್ಮಿಕ ಸ್ಥಳದಲ್ಲಿ ಆಡಳಿತ ಮಂಡಳಿಯವರು ಜಯಪ್ರಕಾಶ್ ಹೆಗ್ಡೆ ಜೊತೆಗೂಡಿ ಚುನಾವಣಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೆ ಪ್ರಭಾವ ಬೀರಿರುವುದು ಕಂಡು ಬಂದಿದೆ ಎಂದು ದೂರಲಾಗಿದೆ. ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು