Categories: ಉಡುಪಿ

ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು

ಉಡುಪಿ: ಉಡುಪಿ -ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಶಿರ್ವ ಗ್ರಾಮದ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಸಭೆ ನಡೆಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವುದಾಗಿ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾರ್ಚ್ 26ರಂದು ರಾತ್ರಿ 11.30ರ ಸುಮಾರಿಗೆ ಜಯಪ್ರಕಾಶ್ ಹೆಗ್ಡೆ ಶಿರ್ವ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಸಾರ್ವಜನಿಕರೊಂದಿಗೆ ಸಭೆ ನಡೆಸಿ ಹೋಗಿರುವುದಾಗಿ ಕಾಪು ಪೈಯಿಂಗ್ ಸ್ಕಾಡ್ ಟೀಮ್ ಗೆ ಮಾಹಿತಿ ಬಂದಿತ್ತು. ಅದರಂತೆ ತಂಡ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೈವಸ್ಥಾನದ ಆಡಳಿತ ಮಂಡಳಿಯವರು ತಡರಾತ್ರಿಯವರೆಗೆ ಕಾರ್ಯಕ್ರಮ ನಡೆಸಿರುವುದು ಮತ್ತು ಈ ಧಾರ್ಮಿಕ ಸ್ಥಳದಲ್ಲಿ ಆಡಳಿತ ಮಂಡಳಿಯವರು ಜಯಪ್ರಕಾಶ್ ಹೆಗ್ಡೆ ಜೊತೆಗೂಡಿ ಚುನಾವಣಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೆ ಪ್ರಭಾವ ಬೀರಿರುವುದು ಕಂಡು ಬಂದಿದೆ ಎಂದು ದೂರಲಾಗಿದೆ. ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Chaitra Kulal

Recent Posts

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

12 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

18 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

44 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

46 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

60 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

1 hour ago