ಉಡುಪಿ: ಮಣಿಪಾಲದಲ್ಲಿ ವಿದ್ಯಾರ್ಥಿ ಮೇಲೆ ಕ್ಷುಲ್ಲಕ್ಕ ಕಾರಣಕ್ಕೆ ಗುಂಪೊಂದರಿಂದ ಹಲ್ಲೆ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.
ಸುಮಾರು ಐದಾರು ಮಂದಿಯಿದ್ದ ತಂಡವೊಂದು ವಿದ್ಯಾರ್ಥಿಯೋರ್ವನನ್ನು ಅಟ್ಟಾಡಿಸಿ ಕೊಂಡು ಬಂದು ,ಅಪಾರ್ಟ್ ಮೆಂಟ್ ಗೆ ನುಗ್ಗಿ ಯದ್ವಾತದ್ವಾ ಹಲ್ಲೆಗೈದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಣಿಪಾಲದ ಸರಳಬೆಟ್ಟುವಿನ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿರುವ ಮಣಿಪಾಲದ ಎಂಐಟಿ ಯ ಬಿ.ಟೆಕ್ ವಿದ್ಯಾರ್ಥಿ ಅಭಿಷೇಕ್ (23) ಎಂಬ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ: ವಿದ್ಯಾರ್ಥಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳ ತಂಡ
Photo Credit :
NewsKarnataka
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.