News Karnataka Kannada
Friday, May 03 2024
ಉಡುಪಿ

ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಪ್ರತಿಭಟನೆ

ABVP protests against state government's decision to scrap National Education Policy
Photo Credit : News Kannada

ಉಡುಪಿ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದುಗೊಳಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಸರಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಎಬಿವಿಪಿ ಜಿಲ್ಲಾ ಸಂಚಾಲಕ ಗಣೇಶ್ ಪೂಜಾರಿ, ತಾಲೂಕು ಸಂಚಾಲಕ ಅಜಿತ್ ಜೋಗಿ, ನಗರ ಕಾರ್ಯದರ್ಶಿ ಶ್ರೀವತ್ಸ ಡಿ ಗಾಂವ್ಸ್ ಕರ್, ಸಹ ಕಾರ್ಯದರ್ಶಿ ಕಾರ್ತಿಕ್, ಭಾವನಾ, ನಗರ ವಿದ್ಯಾರ್ಥಿನಿ ಸಹ-ಪ್ರಮುಖ್ ಕೃತಿ ಮತ್ತು ಪ್ರಮುಖರಾದ ಸ್ವಸ್ತಿಕ್, ಕಿಶೋರ್, ನವೀನ್, ಪ್ರಸನ್ನ, ಭೂಷಣ್, ಅಕ್ಷಯ್ ಹೆಗ್ಡೆ, ಮಹೇಶ್ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು