News Karnataka Kannada
Sunday, May 12 2024
ಉಡುಪಿ

ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ ಒದಗಿಸಲು ಕ್ರಿಯಾ ಯೋಜನೆ: ಸಿಎಂ ಸಿದ್ದರಾಮಯ್ಯ

Action plan to provide permanent solution to prevent sea erosion: CM Siddaramaiah
Photo Credit : News Kannada

ಉಡುಪಿ: ಕಡಲ್ಕೊರೆತ ತಡೆ ಕುರಿತಂತೆ ಶಾಶ್ವತ ಪರಿಹಾರ ಒದಗಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು, ಇದಕ್ಕೆ ಎಷ್ಟು ಹಣ ಬೇಕು ಎಂಬ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಅನುದಾನ ಹೊಂದಾಣಿಕೆ ಮಾಡಲಾಗುವುದು. ಕರಾವಳಿ ಭಾಗದ ಕಡಲ ತೀರದಲ್ಲಿ ಸಾಕಷ್ಟು ಕಾಮಗಾರಿಗಳು ನೆಡೆದಿದ್ದು, ಇನ್ನು ಅನೇಕ ಕಾಮಗಾರಿ ಬಾಕಿ ಇವೆ ಹಾಗೂ ಹೊಸ ಕಾಮಗಾರಿ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ಪಡುಬಿದ್ರೆ ಬೀಚ್ ನಲ್ಲಿ ಕಡಲ್ಕೊರೆತ ವೀಕ್ಷೀಸಿ ಮಾತನಾಡಿದರು. ಉಡುಪಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಯ ವೇತನ ಬಿಡುಗಡೆ ಬಗ್ಗೆ ಕೂಡಲೇ ಹಣಕಾಸು ಇಲಾಖೆಗೆ ಸೂಚನೆ ನೀಡಲಾಗುವುದು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಬಂದರು ಮತ್ತು ಮೀನುಗಾರಿಕೆ ಸಚಿವ ಮಾಂಕಳು ವೈದ್ಯ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಮತ್ತಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು