News Karnataka Kannada
Friday, May 03 2024
ಉಡುಪಿ

ಅಂಬಾಗಿಲು: ಬೈಕ್ ಗೆ ಟಿಪ್ಪರ್ ಡಿಕ್ಕಿ; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

: ಹಿಂದಿನಿಂದ ಬಂದ ಟಿಪ್ಪರ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಟಿಪ್ಪರ್ ನ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ಉಡುಪಿ-ಅಂಬಾಗಿಲು ಮುಖ್ಯ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
Photo Credit : NewsKarnataka

ಉಡುಪಿ: ಹಿಂದಿನಿಂದ ಬಂದ ಟಿಪ್ಪರ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಟಿಪ್ಪರ್ ನ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಪ್ರಾಣಬಿಟ್ಟ ಘಟನೆ ಉಡುಪಿ-ಅಂಬಾಗಿಲು ಮುಖ್ಯ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಮೃತ ಸವಾರನನ್ನು ಬ್ರಹ್ಮಾವರ ಮಟಪಾಡಿ ನಿವಾಸಿ ಪ್ರಭಾಕರ ಆಚಾರಿ ಎಂದು ಗುರುತಿಸಲಾಗಿದೆ. ಅವರು ಅಂಬಾಗಿಲಿನಿಂದ ಪೆರಂಪಳ್ಳಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ಅಂಬಾಗಿಲು- ಪೆರಂಪಳ್ಳಿ ರಸ್ತೆಯ ತಿರುವಿನಲ್ಲಿ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.

ಟಿಪ್ಪರ್ ಡಿಕ್ಕಿಯಾದ ರಭಸಕ್ಕೆ ಟಿಪ್ಪರ್ ನ ಚಕ್ರದಡಿಗೆ ಸಿಲುಕಿದ ಪ್ರಭಾಕರ್ ಅವರು ಸ್ಥಳದಲ್ಲೇ ಉಸಿರುಚೆಲ್ಲಿದ್ದಾರೆ. ಬೈಕ್ ನಲ್ಲಿದ್ದ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು