ಹೆಬ್ರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕಂದಕಕ್ಕೆ ಉರುಳುಬಿದ್ದ ಘಟನೆ ಹೆಬ್ರಿ ತಾಲೂಕಿನ ಅಂಡಾರು ಕರಿಯಾಲು ಕ್ರಾಸ್ ಬಳಿ ಇಂದು ನಸುಕಿನಲ್ಲಿ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ. ಕಾರು
ಕೆರ್ವಾಶೆಯಿಂದ ಅಜೆಕಾರು ಕಡೆಗೆ ಪ್ರಯಾಣಿಸುತ್ತಿತ್ತು. ಅಂಡಾರು ಸಮೀಪ ಬರುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಬಿದ್ದಿದೆ. ಇದರಿಂದ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಅಜೆಕಾರಿನ ವ್ಯಕ್ತಿಯೊಬ್ಬರಿಗೆ ಸೇರಿದ್ದು, ಅತೀ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.