ಉಡುಪಿ: ಕಳೆದ 11 ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಲಾಗಿದೆ. ಪೊಲೀಸರ ವಿಶೇಷ ಪ್ರಯತ್ನದಿಂದ ಸ್ಯಾಂಟ್ರೊ ರವಿಯ ಬಂಧನವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಉಡುಪಿ ಎಸ್ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಕಾನೂನು ಪ್ರಕ್ರಿಯೆ ಮುಗಿಸಿಕೊಂಡು ಆತನನ್ನು ಬೆಂಗಳೂರಿಗೆ ಕರೆ ತರಲಾಗುತ್ತದೆ. ಸರಕಾರದ ಮೇಲೆ ಎಲ್ಲಾ ರೀತಿಯ ಟೀಕೆಗಳು ಇತ್ತು. ಸರಕಾರ ಮೀನ ಮೇಷ ಎಣಿಸುತ್ತಿದೆ ಹಾಗೂ ಒತ್ತಡ ಇದೆ ಎನ್ನುತ್ತಿದ್ದರು. ಆದರೆ ಸರಕಾರದ ಮೇಲೆ ಯಾವ ಒತ್ತಡವು ಇರಲಿಲ್ಲ.
ನಾವು ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೆವು. ಎಲ್ಲೇ ಇದ್ದರೂ ಹೇಗೆ ಇದ್ದರೂ ಕರೆತಂದು ವಿಚಾರಿಸಬೇಕೆಂದು ಹೇಳಿದ್ದೆವು ಎಂದರು.
ಆರೋಪಿ ರವಿಯೊಂದಿಗೆ ಯಾವುದೇ ಅಧಿಕಾರಿ, ರಾಜಕಾರಣಿ ಇದ್ದರೂ ಕೂಡ ತನಿಖೆಯಿಂದ ಹೊರಗೆಳೆಯುತ್ತೇವೆ. ಆತನ ಜೊತೆಗೆ ಇರುವವರನ್ನು ಕೂಡ ಬಂಧಿಸಲಾಗುವುದು ಎಂದು ಹೇಳಿದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…