ಉಡುಪಿ: ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರ ಗುರುಗಳಾದ ಸುಜ್ಞಾನೇಂದ್ರತೀರ್ಥ ಶ್ರೀಪಾದರ ಆರಾಧನಾ ಮಹೋತ್ಸವದ ಅಂಗವಾಗಿ ಹಿರಿಯಡಕದ ಸಮೀಪದ ಪುತ್ತಿಗೆ ಮೂಲ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಸುಶೀಂದ್ರತೀರ್ಥ ಶ್ರೀಪಾದರು ಮಠದ ಪಟ್ಟದ ದೇವರಾದ ಶ್ರೀವಿಠಲ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಆರಾಧನಾ ಮಹೋತ್ಸವದ ಪ್ರಯುಕ್ತ ಭೋಜನಾ ವ್ಯವಸ್ಥೆ ಮಾಡಲಾಗಿದ್ದು, ನೂರಾರು ಭಕ್ತರು ಆಗಮಿಸಿ ಪ್ರಸಾದ ಸ್ವೀಕರಿಸಿದರು.