21 ವರ್ಷದ ಬಳಿಕ ಕೊಲ್ಲೂರು ಮೂಕಾಂಬಿಕೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ

ಕೊಲ್ಲೂರು: ಕೊಲ್ಲೂರು ಮೂಕಾಂಬಿಕಾ ದೇವಿಗೆ 21 ವರ್ಷಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಶಾಸ್ತ್ರದಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಅಷ್ಟಬಂಧ ನಡೆಸಬೇಕು ಎಂದಿದ್ದರೂ ಅನಿವಾರ್ಯ ಕಾರಣಗಳಿಂದ ಕಳೆದ 21 ವರ್ಷಗಳಿಂದ ದೇವಸ್ಥಾನದಲ್ಲಿ ಬ್ರಹ್ಮಕಲಶ ನಡೆಯದಿರಲಿಲ್ಲ. ಅದಕ್ಕೆ ಈಗ ಕಾಲ ಕೂಡಿ ಬಂದಿದೆ.

ಎ.30ರಿಂದ ಮೇ 11 ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಲಿದೆ. ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ಕೆ ಅಂದಾಜು 5 ಕೋಟಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದ್ದು, ದೇವಸ್ಥಾನದಿಂದ 2 ಕೋಟಿ ಬಳಸಿಕೊಳ್ಳಲು ಹಾಗೂ ಉಳಿದ 3 ಕೋಟಿಯನ್ನು ಭಕ್ತರಿಂದ ಸಂಗ್ರಹಿಸಿ ಖರ್ಚು ಮಾಡಲು ಸರ್ಕಾರ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಎಲ್ಲಾ ಸಹೃದಯ ಭಕ್ತರ ಸಹಕಾರವನ್ನು ಕೋರಲಾಗಿದೆ.

1972 ರಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಸುವಾಗ ದೇವಸ್ಥಾನದ ಪರಿವಾರ ದೇವರುಗಳಲ್ಲಿ ಪ್ರಮುಖವಾದ ವೀರಭದ್ರ ದೇವರ ಗುಡಿಯ ಜೀರ್ಣೋದ್ಧಾರ ಕಾರ್ಯ ನಡೆಸಲಾಗಿತ್ತು. 2002ರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಕ್ಷೇತ್ರಕ್ಕೆ ನೂತನ ಶಿಲಾ ಮಹಾದ್ವಾರ, ಸ್ವಾಗತ ಗೋಪುರ ಹಾಗೂ ಸ್ವರ್ಣಲೇಪಿತ ಧ್ವಜಸ್ತಂಭ ಸಮರ್ಪಣೆ ನಡೆದಿತ್ತು. ಈ ಬಾರಿಯ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವದಲ್ಲಿ ವೀರಭದ್ರ ದೇವರ ನೂತನ ಶಿಲಾಮಯ ದೇವಸ್ಥಾನ ಹಾಗೂ ನೂತನ ಬ್ರಹ್ಮರಥ ಲೋಕಾರ್ಪಣೆಯಾಗಿರುವುದು ವಿಶೇಷವಾಗಿದೆ.

Ashika S

Recent Posts

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

1 min ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

8 mins ago

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

25 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

52 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago