ಉಡುಪಿ: ರಾಜ್ಯದಲ್ಲಿ ಅತ್ಯಂತ ವಿವಾದದ ಸ್ವರೂಪ ಪಡೆದಿರುವ ಉಡುಪಿ ಕಾಲೇಜು ಶೌಚಗೃಹದಲ್ಲಿ ಹಿಂದೂ ಹುಡಗಿಯರ ವಿಡಿಯೋ ಮಾಡಿದ ಆರೋಪದಡಿ ಮೂವರು ಮುಸ್ಲಿಂ ವಿದ್ಯಾರ್ಥಿನಿಯರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇನ್ನು ಬಂಧನಕ್ಕೂ ಮುನ್ನವೇ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಜಿಲ್ಲಾ ನ್ಯಾಯಾಲಯದಿಂದ ಜಾಮೀನು ನೀಡಲಾಗಿದೆ.
ವೀಡಿಯೋ ಮಾಡಿದ ಮುಸ್ಲಿಂ ಸಮುದಾಯದ ಮೂರು ವಿದ್ಯಾರ್ಥಿಗಳ ಮೇಲೆ ಆಡಳಿತ ಮಂಡಳಿಯ ವಿರುದ್ಧ ಸಾಕ್ಷ್ಯನಾಶ ಆರೋಪದಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು. ಸೆಕ್ಷನ್ 509, 204, 175,34, ಸೇರಿ ವಿವಿಧ ಪ್ರಕರಣಗಳನ್ನು ದಾಖಲು ಮಾಡಿಲಾಗಿತ್ತು. ಈ ಮೂಲಕ ರಾಜ್ಯಾದ್ಯಂತ ಬಿಜೆಪಿ ನಾಯಕರು, ಹಲವು ಹಿಂದೂ ಸಂಘಟನೆಗಳು, ಮಹಿಳೆಯರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ವಿಚಾರಣೆಯನ್ನು ಆರಂಭಿಸಲಿದ್ದಾರೆ.
ಇನ್ನು ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ತನಿಖೆಗೆ ಮುಂದಾದ ಪೊಲೀಸರು ವಿಡಿಯೋ ಮಾಡಲಾಗಿದ್ದ ಮೊಬೈಲ್ ಅನ್ನು ಕಾಲೇಜು ಆಡಳಿತ ಮಂಡಳಿಗೆ ನೀಡಲಾಗಿತ್ತು. ಇದಾದ ನಂತರ ನೇರವಾಗಿ ವಕೀಲರ ಮೂಲಕ ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದ ವಿದ್ಯಾರ್ಥಿಗಳು ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದಾರೆ. ಈ ಮೂಲಕ ಬಂಧನದ ಭೀತಿಯಿಂದ ಪಾರಾಗಿದ್ದಾರೆ.