News Karnataka Kannada
Thursday, April 25 2024
Cricket
ಉಡುಪಿ

ಬೈಕ್ ಗೆ ಲಾರಿ ಡಿಕ್ಕಿ: ಬ್ಯಾಂಕ್ ಮ್ಯಾನೇಜರ್ ಮೃತ್ಯು

ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾ.ಹೆ.66ರ ಆರಾಟೆ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.
Photo Credit : News Kannada

ಉಡುಪಿ: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾ.ಹೆ.66ರ ಆರಾಟೆ ಎಂಬಲ್ಲಿ ಶನಿವಾರ ರಾತ್ರಿ ನಡೆದಿದೆ.

ಮೃತರನ್ನು ರಾಹುಲ್ ಬಾಲಕೃಷ್ಣ ರಣಕಂಬೆ ಎಂದು ಗುರುತಿಸಲಾಗಿದೆ.

ಮೂಲತಃ ಮಹಾರಾಷ್ಟ್ರದವರಾದ ರಾಹುಲ್ ಅವರು, ಮರವಂತೆ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಶನಿವಾರ ಸಂಜೆ ಬ್ಯಾಂಕಿನ ಕರ್ತವ್ಯ ಮುಗಿಸಿ ತನ್ನ ಬೈಕಿನಲ್ಲಿ ಕುಂದಾಪುರದ ಮನೆಗೆ ತೆರಳುತ್ತಿದ್ದ ವೇಳೆ ಆರಾಟೆ ಬಸ್ ನಿಲ್ದಾಣದ ಬಳಿ ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪರಿಣಾಮ ರಾಹುಲ್ ಅವರು ತೀವ್ರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು