Categories: ಉಡುಪಿ

ಹಿರಿಯಡಕದಲ್ಲಿ ಮೂರು ದಿನಗಳ ಕೃಷಿ ಮೇಳ, ಸಾಂಸ್ಕೃತಿಕ ವೈಭವಕ್ಕೆ ಚಾಲನೆ

ಹಿರಿಯಡಕ: ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘ ಪರ್ಕಳ, ವೆನಿಲ್ಲಾ ಅಭಿವೃದ್ಧಿ ಟ್ರಸ್ಟ್ ಹಿರಿಯಡ್ಕ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಹಾಗೂ ಜಿಲ್ಲಾ ಕೃಷಿಕ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಹಿರಿಯಡ್ಕ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾದ ಮೂರು ದಿನಗಳ ಕೃಷಿ ಮೇಳ ಮತ್ತು ಸಾಂಸ್ಕೃತಿಕ ವೈಭವಕ್ಕೆ ಇಂದು ಚಾಲನೆ ನೀಡಲಾಯಿತು.

ಕೃಷಿ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಮಂಗಳೂರು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರು, ರೈತರು ಪ್ರಯೋಗಶೀಲರಾಗಬೇಕು. ಮುಂದಿನ ದಿನಗಳಲ್ಲಿ ಯುವ ಸಮುದಾಯ ಕೃಷಿಯಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು. ಉನ್ನತ ಶಿಕ್ಷಣ ಪಡೆದರೂ ಇಂದು ಉದ್ಯೋಗ ಸಿಗುತ್ತಿಲ್ಲ. ಆದುದರಿಂದ ಯುವ ಜನತೆ ಸ್ವಾವಲಂಬಿಯಾಗಿ ಬದುಕಲು ಹೈನುಗಾರಿಕೆ, ಮತ್ಸೋದ್ಯಮ ಸೇರಿದಂತೆ ಕೃಷಿ ಪೂರಕವಾದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ವಸ್ತು ಪ್ರದರ್ಶನವನ್ನು ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ ಉದ್ಘಾಟಿಸಿದರು. ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ.ಬಿ.ಹೇಮ್ಲಾ ನಾಯಕ್ ದಿಕ್ಸೂಚಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಸಾಧಕ ಕೃಷಿಕರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಬೊಮ್ಮರಬೆಟ್ಟು ಗ್ರಾಪಂ ಅಧ್ಯಕ್ಷ ಸುರೇಶ್ ನಾಯಕ್ ವಹಿಸಿದ್ದರು. ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯ ಶ್ಯಾಮಲಾ ಕುಂದರ್, ಕರ್ನಾಟಕ ರಾಜ್ಯ ಬಸ್ ಮಾಲಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಹೆರ್ಗ ವ್ಯವಸಾಯ ಸೇವಾ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಮೇಶ್ ನಾಯಕ್, ರೈತರ ಸಹಕಾರಿ ಸಂಘದ ಅಧ್ಯಕ್ಷ ಬಿ.ಅಶೋಕ್ ಕುಮಾರ್ ಶೆಟ್ಟಿ, ಗ್ರಾಪಂ ಉಪಾಧ್ಯಕ್ಷೆ ಲತಾ ಕೃಷಿ ವಿವಿಯ ಸಂಶೋಧನಾ ನಿರ್ದೇಶಕ ಡಾ.ಮೃತ್ಯುಂಜಯ ವಾಲಿ, ಬ್ರಹ್ಮಾವರ ಕೃಷಿ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ.ಲಕ್ಷ್ಮಣ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಭುವನೇಶ್ವರಿ ಉಪಸ್ಥಿತರಿದ್ದರು.

ಕೃಷಿ ಮೇಳ ಸಮಿತಿ ಗೌರವಾಧ್ಯಕ್ಷ ಪಳ್ಳಿ ನಟರಾಜ್ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ ಸ್ವಾಗತಿಸಿದರು. ಉಪನ್ಯಾಸಕಿ ನಳಿನಿ ಎಂ.ಆರ್. ಕಾರ್ಯಕ್ರಮ ನಿರೂಪಿಸಿದರು.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

3 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

3 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

4 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

4 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

4 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

4 hours ago