Categories: ಉಡುಪಿ

ಕಟಪಾಡಿಯ 2ನೇ ವರ್ಷದ ಬಿಕಾಂ ವಿದ್ಯಾರ್ಥಿನಿ ನಾಪತ್ತೆ

ಉಡುಪಿ: ರಾತ್ರಿ ಮನೆಯಲ್ಲಿ ಮಲಗಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಬೆಳಿಗ್ಗೆ ಮನೆಯವರು ಎದ್ದು ನೋಡುವಾಗ ನಾಪತ್ತೆಯಾಗಿರುವ ಘಟನೆ ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್. ನಗರದಲ್ಲಿ ನಡೆದಿದೆ.

ಕಟಪಾಡಿ ಏಣಗುಡ್ಡೆ ಗ್ರಾಮದ ಜೆ. ಎನ್. ನಗರದ ನಿವಾಸಿ ಶೈನಾಜ್ (20) ನಾಪತ್ತೆಯಾದ ವಿದ್ಯಾರ್ಥಿನಿ. ಇವರು ಉಡುಪಿ ಅಜ್ಜರಕಾಡು ಸರಕಾರಿ ಕಾಲೇಜಿನಲ್ಲಿ 2ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಫೆಬ್ರವರಿ 25 ರಂದು ರಾತ್ರಿ ತನ್ನ ಅಜ್ಜಿಯೊಂದಿಗೆ ಮಲಗಿದ್ದು, ಮರುದಿನ ಬೆಳಿಗ್ಗೆ ಎದ್ದು ನೋಡಿದಾಗ ನಾಪತ್ತೆಯಾಗಿದ್ದರು. ಈ ಬಗ್ಗೆ ಸಂಬಂಧಿಕರಲ್ಲಿ, ಸ್ನೇಹಿತರಲ್ಲಿ ವಿಚಾರಿಸಿ, ಉಡುಪಿ ಬಸ್‌ ನಿಲ್ದಾಣ, ಅಜ್ಜರಕಾಡು ಮಹಿಳಾ ಕಾಲೇಜು ಕಡೆಗಳಲ್ಲಿ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಕಾಣೆಯಾದ ತನ್ನ ಮಗಳನ್ನು ಪತ್ತೆ ಮಾಡಿಕೊಡುವಂತೆ ಆಕೆಯ ತಾಯಿ ನೂರ್ ಜಹಾನ್ ಕಾಪು ಪೊಲೀಸ್ ಠಾಣೆಯಲ್ಲಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಕಾಣೆಯಾದ ಶೈನಾಜ್ 20 ವರ್ಷ ಪ್ರಾಯದವರಾಗಿದ್ದು 5 ಅಡಿ ಎತ್ತರ, ಗೋಧಿ ಮೈ ಬಣ್ಣ ಹೊಂದಿದ್ದು ಮನೆಯಿಂದ ತೆರಳುವಾಗ ನೇವಿ ಬ್ಲೂ ಬಣ್ಣದ ಬುರ್ಕಾ ಧರಿಸಿದ್ದಳು. ಕನ್ನಡ, ತುಳು, ಹಿಂದಿ, ಉರ್ದು ಭಾಷೆ ಬಲ್ಲವಳಾಗಿದ್ದು ಈಕೆಯನ್ನು ಗುರುತಿಸಿದವರು ಕಾಪು ಪೊಲೀಸ್‌ ಠಾಣೆ 0820-2551033 ಗೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago