ಉಡುಪಿ

ಬಜೆಟ್ ನಲ್ಲಿ ಬಿಲ್ಲವ, ಮೊಗವೀರ ಸಮುದಾಯದ ಸಂಪೂರ್ಣ ಕಡೆಗಣನೆ: ರಮೇಶ್ ಕಾಂಚನ್ ಆಕ್ರೋಶ

ಉಡುಪಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಬಿಲ್ಲವರಿಗೆ ಪ್ರತ್ಯೇಕ ನಿಗಮವನ್ನು ಬಜೆಟ್ ನಲ್ಲಿ ಘೋಷಣೆ ಮಾಡಿ ಅನುದಾನ ಇಡುವುದಾಗಿ ಹಾಗೂ ಮೀನುಗಾರರಿಗೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಹೇಳಿ ಪ್ರಚಾರ ಗಿಟ್ಟಿಸಿಕೊಂಡ ಮುಖ್ಯಮಂತ್ರಿ ಬೊಮ್ಮಾಯಿ ತಮ್ಮ ಬಜೆಟ್ ನಲ್ಲಿ ಬಿಲ್ಲವ ಹಾಗೂ ಮೊಗವೀರ ಸಮುದಾಯಗಳಿಗೆ ಯಾವುದೇ ಯೋಜನೆ ನೀಡಿದೆ ಸಂಪೂರ್ಣವಾಗಿ ಕಡೆಗಣಿಸಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಲ್ಲವ- ಈಡಿಗ ಸಮುದಾಯವರು ಪ್ರತ್ಯೇಕ ನಿಗಮಕ್ಕಾಗಿ ಹಲವಾರು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ, ನಿಗಮದ ವಿಚಾರದಲ್ಲಿ ಒಂದೇ ಒಂದು ಶಬ್ದ ಕೂಡ ಮಾತನಾಡದಿರುವುದು ಬಿಲ್ಲವರ ಬಗ್ಗೆ ಬಿಜೆಪಿಗೆ ಇರುವ ಕಾಳಜಿ ಏನು ಎಂಬುವುದನ್ನು ಎತ್ತಿ ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಕರಾವಳಿಯ ಶಾಸಕರಾದ ಸುನೀಲ್ ಕುಮಾರ್, ರಘುಪತಿ ಭಟ್ ಇವರುಗಳು ತಾವು ದೊಡ್ಡ ಸಾಧನೆ ಮಾಡಿದ್ದೇವೆ ಎಂದು ತೋರಿಸುವ ನಿಟ್ಟಿನಲ್ಲಿ ಬಿಲ್ಲವ ಮುಖಂಡರನ್ನು ಮುಖ್ಯಮಂತ್ರಿಗಳ ನಿವಾಸಕ್ಕೆ ಕರೆದುಕೊಂಡು ಹೋಗಿ ಬೊಮ್ಮಾಯಿ ಅವರಿಗೆ ಸನ್ಮಾನ ಮಾಡಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಿಸುವುದಾಗಿ ಭರವಸೆಯನ್ನು ನೀಡಿದ್ದರು. ಆದರೆ ಅವರು ಬಿಲ್ಲವ ಸಮಾಜಕ್ಕೆ ಮೋಸ ಮಾಡಿದ್ದಾರೆ. ಬಜೆಟ್ನಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆಯಾಗಿಲ್ಲ. ಬಿಲ್ಲವ ಈಡಿಗ ಸಮಾಜವನ್ನು ಕಡೆಗಣನೆ ಮಾಡಲಾಗಿದೆ. ರಾಜ್ಯದಲ್ಲಿ ಬಿಲ್ಲವ ಈಡಿಗ ಸಮಾಜದ 60 ಲಕ್ಷ ಜನರಿದ್ದಾರೆ. ರಾಜ್ಯ ಸರ್ಕಾರ ಮಾಡಿದ ಈ ಮೋಸಕ್ಕೆ ಮುಂದಿನ ದಿನಗಳಲ್ಲಿ ಬಿಲ್ಲವರು ತಕ್ಕ ಉತ್ತರ ನೀಡುತ್ತಾರೆ. ಅದೇ ರೀತಿ ಮೊಗವೀರ ಸಮುದಾಯಕ್ಕೆ ನೀಡಲಾಗಿರುವ ಮತ್ಯ್ಸಾಶ್ರಯ ಮನೆಗಳನ್ನು ಕೂಡ ಹೆಚ್ಚಳ ಮಾಡುವ ಕುರಿತು ಯಾವುದೇ ವಿಚಾರ ಬಜೆಟ್ನಲ್ಲಿ ಇಲ್ಲ. ಈ ಹಿಂದಿನ ಎರಡು ಬಜೆಟ್ಗಳಲ್ಲಿ ಘೋಷಣೆಯಾಗಿದ್ದ ಮನೆಗಳು ಸಹ ಮೀನುಗಾರರಿಗೆ ಸರಿಯಾಗಿ ಲಭಿಸಿಲ್ಲ.

ರೈತ ಸಮುದಾಯ ಇಂದು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು ಕಾಡು ಪ್ರಾಣಿಗಳ ಹಾವಳಿಯಿಂದಾಗಿ ಬೆಳೆದ ಬೆಳೆ ಕೈಗೆ ಬಾರದೆ ನಷ್ಟ ಅನುಭವಿಸುತ್ತಿದ್ದು, ಇನ್ನೊಂದೆಡೆ ಭತ್ತ ಹಾಗೂ ಇತರ ಬೆಳೆಗಳಿಗೆ ಸೂಕ್ತವಾದ ಬೆಂಬಲ ಬೆಲೆ ಕೂಡ ನೀಡುವ ಕುರಿತು ಬಜೆಟ್ನಲ್ಲಿ ಯಾವುದೇ ರೀತಿಯ ಘೋಷಣೆಗಳಿಲ್ಲ. ರೈತರನ್ನು ಅವರ ಸಮಸ್ಯೆಗಳಿಂದ ಮೇಲಕ್ಕೆ ಎತ್ತುವುದು ಬಿಡಿ ಅವರ ಬಗ್ಗೆ ಆಸಕ್ತಿಯೇ ಇಲ್ಲ ಎನ್ನುವಂತೆ ಬಜೆಟ್ ಮಂಡಿಸಿದ್ದಾರೆ. ಸತತ ಎರಡು ದಿನ ರಾಜ್ಯದಾದ್ಯಂತ ಪೌರಕಾರ್ಮಿಕರು ತಮ್ಮ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡಿದ್ದು, ಪೌರಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದ್ದರು. ಆದರೆ ಅವರೇ ಮಂಡಿಸಿದ ಬಜೆಟ್ನಲ್ಲಿ ಈ ಬಗ್ಗೆ ಚಕಾರವೆತ್ತದಿರುವುದು ಪೌರಕಾರ್ಮಿಕರಿಗೆ ಎಸಗಿದ ದ್ರೋಹವಾಗಿದೆ.

ಚುನಾವಣೆಗಾಗಿ ಬಣ್ಣ ಬಣ್ಣದ ಘೋಷಣೆ ಮಾಡಿ ರಾಜ್ಯದ ಜನರ ಕಿವಿ ಮೇಲೆ ಹೂವಿಡುವ ಪ್ರಯತ್ನದಲ್ಲಿದ್ದಾರೆ ಅಷ್ಟೇ. ಯಾವುದೇ ಯೋಜನೆ ಬಗ್ಗೆ ಕೇಳಿದರೂ ಅನುದಾನವಿಲ್ಲ, ಹಣವಿಲ್ಲ ಎನ್ನುವವರ ಬಜೆಟ್ನಿಂದ ನಿರೀಕ್ಷೆ ಇಟ್ಟುಕೊಳ್ಳುವುದು ವ್ಯರ್ಥವಾಗಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಬಜೆಟನ್ನು ಕೇವಲ ಭರವಸೆಗಳಿಗೆ ಮಾತ್ರ ಸೀಮಿತಗೊಳಿಸಿದ್ದಾರೆ. ಮುಖ್ಯಮಂತ್ರಿಗಳು ಓದಿರುವ ಬಜೆಟ್ ರಾಜ್ಯದ ಜನರ ಕಿವಿ ಮೇಲೆ ಹೂವಿಡುವ ಪ್ರಯತ್ನವಷ್ಟೇ ಎಂದು ಟೀಕಿಸಿದ್ದಾರೆ.

Sneha Gowda

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

34 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

41 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

52 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago