News Karnataka Kannada
Wednesday, May 15 2024
ಉಡುಪಿ

ಉಡುಪಿ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

BJP protests against state government
Photo Credit : News Kannada

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ದಲಿತ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ 11,000 ಕೋಟಿ ರೂಪಾಯಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಎಸ್ ಸಿ, ಎಸ್ ಟಿ ಮೋರ್ಚಾದ ನೇತೃತ್ವದಲ್ಲಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ‌ ಇಂದು ಪ್ರತಿಭಟನೆ ನಡೆಸಲಾಯಿತು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿದರು. ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರಕಾರ ದಲಿತರಿಗೆ ಅನ್ಯಾಯ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಮಾತನಾಡಿ, ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿಗಳಿಗೆ ವರ್ಗಾಯಿಸಿ ದಲಿತರಿಗೆ ಅನ್ಯಾಯ ಮಾಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೂ ಎರಡು ತಿಂಗಳು ಆಗಿಲ್ಲ, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಆರಂಭವಾಗಿದೆ. ಬಿಬಿಎಂಪಿಯ ಗುತ್ತಿಗೆದಾರರು ಕಮಿಷನ್ ದಂಧೆಯಿಂದ ಬೇಸತ್ತು ದಯಾ ಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಶಾಸಕ ಕಿರಣ್ ಕುಮಾರ್ ಕೊಡ್ಗಿ, ಮಾಜಿ ಶಾಸಕ ರಘುಪತಿ ಭಟ್, ಮುಖಂಡರಾದ ದಿನಕರ ಬಾಬು, ಗೀತಾಂಜಲಿ ಸುವರ್ಣ ಮೊದಲಾದವರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು