News Karnataka Kannada
Sunday, May 05 2024
ಉಡುಪಿ

ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ

BJP Rythu Morcha Protests Against Anti-Farmer Policy Of Congress Government In State
Photo Credit : News Kannada

ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಬಿಜೆಪಿ ಕಾಪು ಮಂಡಲ ರೈತ ಮೋರ್ಚಾ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ರೈತ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷೆ ದೇವಿ ತೀರ್ಥರಾಮ್, ಉಡುಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ, ಉಪಾಧ್ಯಕ್ಷ ಸುರೇಂದ್ರ ಪೂಜಾರಿ, ಪ್ರಧಾನ ಕಾರ್ಯದರ್ಶಿಗಳಾದ ಧೀರಜ್, ಗೋಪಾಲ್ ಕಾಂಚನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಕಾಪು ಮಂಡಲ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷ ಗುರುನಂದನ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಶೆಟ್ಟಿ, ಕೇಶವ ಕೋಟ್ಯಾನ್, ರಾಜ್ಯ ಬಿಜೆಪಿ ರೈತ ಮೋರ್ಚಾದ ಪದಾಧಿಕಾರಿ ರಾಘವೇಂದ್ರ ಉಪ್ಪೂರು, ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿ ಗೋಪಾಲ ಕೃಷ್ಣ ರಾವ್ ಹಾಗೂ ಕಾಪು ಪುರಸಭೆಯ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು