ಉಡುಪಿ

ರಾಷ್ಟ್ರೀಯವಾದಿ ಚಿಂತನೆಯ ಸರಕಾರ ರಚನೆಗೆ ಬಿಜೆಪಿ ಗೆಲ್ಲಿಸಿ :ಯಶ್ ಪಾಲ್ ಸುವರ್ಣ

ಉಡುಪಿ: ರಾಷ್ಟ್ರೀಯವಾದಿ ಚಿಂತನೆಯ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ಕಟಿಬದ್ಧವಾಗಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ರಾಜ್ಯ ಬಿಜೆಪಿ ಸರಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಶಕ್ತಿ ತುಂಬುವಂತೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಹೇಳಿದರು.

2024ರ ಲೋಕಸಭಾ ಚುನಾವಣೆಗೆ ಈ ಬಾರಿಯ ಚುನಾವಣೆ ಫಲಿತಾಂಶ ದಿಕ್ಸೂಚಿಯಾಗಲಿದ್ದು, ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಂದರ್ಭದಲ್ಲಿ ಮತ್ತೊಮ್ಮೆ ಡಬಲ್ ಇಂಜಿನ್ ಸರಕಾರ ದೇಶ ಹಾಗೂ ರಾಜ್ಯದಲ್ಲಿ ಜನಪರ ಆಡಳಿತ ನೀಡಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಶಾಸಕ ರಘುಪತಿ ಭಟ್ ಮಾತನಾಡಿ 3 ಬಾರಿ ನಗರ ಸಭಾ ಸದಸ್ಯರಾಗಿ ತಮ್ಮ ಕಾರ್ಯವೈಖರಿ ಹಾಗೂ ಬದ್ಧತೆಯ ಮೂಲಕ ಯುವ ನಾಯಕರಾಗಿ ಮೂಡಿಬಂದಿರುವ ಪಕ್ಷದ ಸಮರ್ಥ ಅಭ್ಯರ್ಥಿ ಯಶ್ ಪಾಲ್ ಸುವರ್ಣ ರನ್ನು ಉಡುಪಿಯ ಜನತೆ ಪ್ರಚಂಡ ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಉಪಾಧ್ಯಕ್ಷರಾದ ಪ್ರಶಾಂತ್ ಕಾಂಚನ್, ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಪಕ್ಷದ ಮುಖಂಡರಾದ ಶ್ರೀ ಸತೀಶ್ ನಾಯಕ್, ಶ್ರೀಮತಿ ಮಾಲತಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Sneha Gowda

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

18 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

41 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

57 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago