Categories: ಉಡುಪಿ

ಮಾರ್ಚ್ 12ಕ್ಕೆ ಉಡುಪಿ ಜಿಲ್ಲೆಗೆ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಯ ಆಗಮನ

ಉಡುಪಿ: ಕರ್ನಾಟಕ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡ  ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಯು ಮಾರ್ಚ್ 12ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದೆ ಎಂದು ವಿಜಯ ಸಂಕಲ್ಪ ರಥಯಾತ್ರೆಯ ರಾಜ್ಯ ಸಹ ಸಂಚಾಲಕ ಕಿಶೋರ್ ಕುಮಾರ್ ಕುಂದಾಪುರ್ ತಿಳಿಸಿದರು.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಇಂದು‌ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ವಿಜಯ ಸಂಕಲ್ಪ ರಥಯಾತ್ರೆಯು ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಹೊರಡಲಿದ್ದು, ಮಾ.13ರಂದು ಕಾಪು ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಲಿದೆ.

ಮಾ.14ರಂದು ಕುಂದಾಪುರ ಮತ್ತು ಬೈಂದೂರು ಕ್ಷೇತ್ರದ ಮೂಲಕ ಶೃಂಗೇರಿಗೆ ತಲುಪಲಿದೆ. ಈ ರಥಯಾತ್ರೆಯಲ್ಲಿ ರೋಡ್ ಶೋ ಮತ್ತು ಪ್ರಮುಖರೊಂದಿಗೆ ಸಂವಾದ ನಡೆಯಲಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವಿಜಯ ಸಂಕಲ್ಪ ರಥಯಾತ್ರೆಯ ಸಂಚಾಲಕ ಪ್ರಕಾಶ್ ಶೆಟ್ಟಿ ಪಾದಬೆಟ್ಟು, ಸಹ ಸಂಚಾಲಕರು ಅನಿತಾ ಶ್ರೀಧರ್, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರ್ ನವೀನ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀಶ ನಾಯಕ್, ಸುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಬಿಜೆಪಿ ವಕ್ತಾರರಾದ ಕೆ ರಾಘವೇಂದ್ರ ಕಿಣಿ, ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಕಾರ್ಕಳ ಮಂಡಲ ಅಧ್ಯಕ್ಷರಾದ ಮಹಾವೀರ್, ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಬಿಜೆಪಿ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಬೈಂದೂರು ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ, ಮಂಡಲಗಳ ವಿಜಯ ಸಂಕಲ್ಪ ರಥಯಾತ್ರೆ ಉಸ್ತುವಾರಿಗಳು ಉಪಸ್ಥಿತರಿದ್ದರು.

Sneha Gowda

Recent Posts

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

6 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

8 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

29 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

43 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

59 mins ago

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

1 hour ago