ಕುಂದಾಪುರ: ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಸ್ಪರ್ಧೆ ಮಾಡಲಿರುವ ಗುರುರಾಜ್ ಗಂಟಿಹೊಳೆ ಅವರು ಏಪ್ರಿಲ್.20 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಸಂಸದ ಯುವ ನಾಯಕ ತೇಜಸ್ವಿ ಸೂರ್ಯ ಭಾಗವಹಿಸಲಿದ್ದಾರೆ.
ಯುವ ನಾಯಕ ಗುರುರಾಜ್ ಗಂಟಿಹೊಳೆ ಅವರನ್ನು ಬೆಂಬಲಿಸಿ ಸಾವಿರಾರು ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಬಿಜೆಪಿ ತಿಳಿಸಿದೆ.